ಬೆಂಗಳೂರು: ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರು ಆಕಸ್ಮಿಕ ಸಾವು ಸೇರಿದಂತೆ ವಿವಿಧ ರೀತಿಯಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ ಆದೇಶ ಪತ್ರ ವಿತರಿಸಿದರು.
ರಾಜ್ಯ ಸರ್ಕಾರದಿಂದ ‘ಹಾವು ಕಡಿತ’ಕ್ಕೆ ಚಿಕಿತ್ಸೆ ನೀಡಲು ‘ಮಾರ್ಗಸೂಚಿ’ ಪ್ರಕಟ: ಈ ‘ನಿಯಮ ಪಾಲನೆ’ ಕಡ್ಡಾಯ
ಕಳೆದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ 200ಕ್ಕೂ ಹೆಚ್ಚಿನ ಮಂದಿ ಮೃತ ನೌಕರರ ಅವಲಂಬಿತರಿಗೆ ದರ್ಜೆ 3 (ಮೇಲ್ವಿಚಾರಕೇತರ) ಮತ್ತು ದರ್ಜೆ 4ರಲ್ಲಿನ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದೀಗ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತ ಅವಲಂಬಿತ 50 ಮಂದಿಗೆ ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ 3 (ಮೇಲ್ವಿಚಾರಕೇತರ) ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ.
ರಾಜ್ಯ ಸರ್ಕಾರದಿಂದ ‘ಮಹತ್ವದ’ ನಿರ್ಧಾರ: ನಿಮ್ಮ ಮನೆಗೆ ಬಾಗಿಲಿಗೆ ಬಂದು ‘ಆರ್ಟಿಸಿ-ಆಧಾರ್’ ಜೋಡಣೆ!
ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ, ಬಿಎಂಟಿಸಿ ಸೇರಿದಂತೆ ಎಲ್ಲ ಸಾರಿಗೆ ನಿಗಮಗಳು ನೌಕರರು ಹಾಗೂ ಅವರ ಕುಟುಂಬದವರನ್ನು ಕಾಪಾಡಲು ಎಲ್ಲ ಕ್ರಮಕೈಗೊಳ್ಳಲಿವೆ. ಅದರಂತೆ ಮೃತ ನೌಕರರ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದರು.
ಇಂದು ‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ: ನಿಮ್ಮ ‘5 ವರ್ಷದೊಳಗಿನ ಮಕ್ಕಳಿಗೆ’ ತಪ್ಪದೇ ಲಸಿಕೆ ಹಾಕಿಸಿ!
ನೇಮಕಾತಿಗೆ ನಿರ್ಧಾರ:
ಬಿಎಂಟಿಸಿ ಸೇವೆ ಮತ್ತಷ್ಟು ಉತ್ತಮಗೊಳಿಸಲು ಖಾಲಿ ಇರುವ 2,500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾ.10ರಿಂದ 9.45 www.kea.kar.nic.in ও ಅರ್ಜಿ ಸಲ್ಲಿಸಬಹುದಾಗಿದೆ. ಆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಸೂಚಿಸಿರುವ ವಿದ್ಯಾರ್ಹತೆ, ದೈಹಿಕ ದೃಢತೆ, ಷರತ್ತು ಮತ್ತು ಸೂಚನೆಗಳನ್ವಯ ಅರ್ಜಿ ಸಲ್ಲಿಸಬೇಕು ಎಂದರು.