ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಸೆಪ್ಟೆಂಬರ್ 1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು ಮತ್ತು ಪರೀಕ್ಷಾ ನಿಯಮಾವಳಿ ರೀತ್ಯ ನಡೆದುಕೊಳ್ಳಬೇಕು. ಕೇಂದ್ರದೊಳಗೆ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಿಡಬೇಕಾಗಿರುವುದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕಾಗುತ್ತದೆ. ಕೆಇಎ ಯಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ.
144 ಸೆಕ್ಷನ್ ಜಾರಿ
ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ಅಲ್ಲಿ ಯಾವುದೇ ಜೆರಾಕ್ಸ್ ಅಂಗಡಿ, ಇಂಟರ್ನೆಟ್ ಸೆಂಟರ್ಗಳನ್ನು ತೆರೆಯುವಂತಿಲ್ಲ.