ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದುಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಫಲಕ ತೆರವಿಗೆ ಮನವಿ ಮಾಡಲಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ಸಲ್ಲಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯದ ವಿರುದ್ಧ ದೂರು ನೀಡಲಾಗಿದೆ. ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದಿಂದ ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ.

ಹಿಂದೂ ಸಂಪ್ರದಾಯದಲ್ಲಿ ಇಂತಹ ಪದ್ದತಿ ಇಲ್ಲ, ದಿವ್ಯಾಂಗರು ಬಟ್ಟೆ ಕಳಚಿ ದರ್ಶನ ಪಡೆಯುವುದು ಕಷ್ಟವಾಗುತ್ತದೆ. ಚರ್ಮರೋಗವಿದ್ದವರು ಅಂಗಿ ಕಳಚಿದರೆ ಚರ್ಮರೋಗ ಬೇರೆಯವರಿಗೂ ಹರಡುವ ಸಾಧ್ಯತೆ ಇದೆ. ಇದು ಸಂವಿಧಾನ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಕೂಡಲೇ  ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡಬೇಕು ಎಂಬ ಸೂಚನಾ ಫಲಕ ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

BIG NEWS: ʻಇಡಿ ಕಾರ್ಯಚಟುವಟಿಕೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲʼ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

BIG NEWS: ತಕ್ಷಣವೇ ರಷ್ಯಾ-ಉಕ್ರೇನ್ ಯುದ್ಧ ಅಂತ್ಯಗೊಳಿಸುವಂತೆ ʻಭಾರತʼ ಕರೆ | India Calls For End To Ukraine War

Share.
Exit mobile version