ಚಿಕ್ಕಮಗಳೂರು : ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ. ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಜನರೇ ಹೆಸರಿಟ್ಟಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದರು. ಇದೀ್ಗ ಸಿಟಿ ರವಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ. ಸಿಟಿ ರವಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಲಾಗಿದೆ.
ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ. ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಜನರೇ ಹೆಸರಿಟ್ಟಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದರು.ಇಂದು ಈ ಹೇಳಿಕೆಗೆ ಸಿ ಟಿ ರವಿ ಸಮರ್ಥನೆ ನೀಡಿದ್ದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾಖಾನ್ ಎಂದು ನಾನಷ್ಟೇ ಹೇಳಿಲ್ಲ, ಈ ಹಿಂದೆ ಈಶ್ವರಪ್ಪ ಕೂಡ ಹೇಳಿದ್ದರು. ಸಿದ್ದರಾಮಯ್ಯರಿಗೆ ಟಿಪ್ಪು ಸುಲ್ತಾನ್, ಟಿಪ್ಪು ಟೋಪಿ ಪ್ರಿಯವಾದುದು ಅಲ್ಲವೇ, ಅದಕ್ಕೆ ಹಾಗೆ ಹೇಳಿದೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಸದ್ಭಾವನೆಯಿಂದ ಬಂದರೆ ಅತಿಥಿಗಳು ಎಂದು ನಾವು ಭಾವಿಸುತ್ತೇವೆ, ಆದರೆ ದರ್ಪದಿಂದ ಬಂದರೆ ಅದೇ ಭಾವನೆಯಿಂದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಗಳಾಗುತ್ತವೆ. ಸಿದ್ರಾಮುಲ್ಲಾ ಖಾನ್ ಎಂದು ನಾನು ಹೆಸರಿಟ್ಟಿಲ್ಲ. ಜನರೇ ಹೆಸರಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದರು.
‘ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಗಳಿದ್ದಾರೆ ಎಂದು ಮೊದಲು ಲೆಕ್ಕ ಹಾಕಲಿ’ : ಸಿಎಂ ಬೊಮ್ಮಾಯಿ ತಿರುಗೇಟು