ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದಂತ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣೆ ಮಾಡಿದ್ದಾರೆ. ಬಿಜೆಪಿಯ ಸಿ.ಟಿ ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ ಉಪನಗರದ ಪೊಲೀಸರಿಗೆ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಜಲಗಿ ದೂರು ನೀಡಿದ್ದಾರೆ.
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಧರಣಿ ನಡೆಸಿದ್ದರು.ಈ ಸಂದರ್ಭದಲ್ಲಿ ಸಿಟಿ ರವಿ ಸಿದ್ಧರಾಮಯ್ಯ ಅವರನ್ನು ಟೀಕಿಸಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿದಂತೆ ಆಗಿದೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.