ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ದೂರು ನೀಡಲಾಗಿದೆ.
ಇಂದು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರುದಾರ ಸ್ನೇಹಮಹಿ ಕೃಷ್ಣ ಅವರು ಇಡಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಇಡಿ ಸಂಕಷ್ಟ ಕೂಡ ಎದುರಾದಂತೆ ಆಗಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದರನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿಯಲಾಗಿತ್ತು.
ಈ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಎಫ್ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿತ್ತು. ಅದರಂತೆ ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅವರ ಪತ್ನಿ ಹಾಗೂ ಭಾಮೈದ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
BREAKING: ಮಂಗಳೂರಲ್ಲಿ ನಡು ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದ ‘BMW’ ಕಾರು, ಬೆಚ್ಚಿ ಬಿದ್ದ ಜನರು
BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ