ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಗೆ ಶಾಕ್ ನೀಡಲಾಗಿದೆ.
ಇಂದು ಆದಾಯ ತೆರಿಗೆ ಇಲಾಖೆಗೆ ತೆರಳಿದಂತ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ದೂರು ನೀಡಲಾಗಿದೆ.
ಅಂದಹಾಗೇ ತೇಜಸ್ ಗೌಡ ಎಂಬುವರು ನೀಡಿರುವಂತ ದೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿಯಲ್ಲಿ ಮೃತಪಟ್ಟಂತ ರಾಜಶೇಖರ್ ಅವರ ಕುಟುಂಬಕ್ಕೆ ಪರಿಹಾರವಾಗಿ 25 ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿದ್ದಾರೆ. ಇದು ಆರ್ ಬಿ ಐ ನಿಯಮವಾಳಿಗೆ ವಿರುದ್ಧವಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪುರುಷ, ಮಹಿಳಾ, ಅಂಧ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತರಿಗೆ ನೀತಾ ಎಂ. ಅಂಬಾನಿ ಅದ್ದೂರಿ ಸನ್ಮಾನ








