ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್

ಬೆಂಗಳೂರು: ಸ್ಮಾರ್ಟ್ ಮೀಟರ್ ವಿಷಯದಲ್ಲಿ ಹತ್ತಾರು ಅವ್ಯವಹಾರದ ದೂರುಗಳಿದ್ದು, ಲೋಕಾಯುಕ್ತರ ಗಮನಕ್ಕೆ ತಂದಿದ್ದೇವೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತನಾರಾಯಣ್ ಅವರು ತಿಳಿಸಿದರು. ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಭ್ರಷ್ಟಾಚಾರದ ಕುರಿತು ಲೋಕಾಯುಕ್ತರಿಗೂ ಸವಿಸ್ತಾರವಾಗಿ ತಿಳಿಸಿದ್ದೇವೆ. ನೇರವಾಗಿ ಲೋಕಾಯುಕ್ತ ಎಸ್ಪಿಗೆ ದೂರು ನೀಡಿದ್ದೇವೆ. ಕ್ರಮ ವಹಿಸಿ ತಾರ್ಕಿಕ ಅಂತ್ಯ ಕೊಡಬೇಕೆಂದು ಕೋರಿದ್ದಾಗಿ ತಿಳಿಸಿದರು. ಭ್ರಷ್ಟಾಚಾರ ತಡೆಗಾಗಿ ಈ ದೂರು ನೀಡಿದ್ದೇವೆ. ಯುದ್ಧ ಪ್ರಾರಂಭವಾಗಿದೆ ಎಂದು ಹೇಳಿದರು. … Continue reading ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್