ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಕ್ಷೇತ್ರದಲ್ಲಿ ಅಂದಾಜು 800 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕೆರೆ ಮತ್ತು ನಾಲೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಳೆಗಾಲ ಶುರುವಾಗುವ ಮುನ್ನವೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಶನಿವಾರ 5 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸೋಮನಹಳ್ಳಿ ಕೆರೆಯನ್ನು ಸ್ವಚ್ಚ, ಸೌಂದರ್ಯಕರಣ ಮಾಡಬೇಕೆಂಬ ಉದ್ದೇಶದಿಂದ ಈಗಾಗಲೇ 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. … Continue reading ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್