ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧ, ಕಾಲಮಿತಿಯಲ್ಲಿ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ತಿಳಿಸಿದರು. ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ರಾಜ್ಯಮಟ್ಟದ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಸವದತ್ತಿಯಲ್ಲಮ್ಮನ ಗುಡ್ಡದಲ್ಲಿ ಸಮಗ್ರ ಅಭಿವೃದ್ಧಿಯ ಬದ್ಧತೆಯನ್ನು ಪ್ರಕಟಿಸಲಾಗಿತ್ತು. … Continue reading ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧ, ಕಾಲಮಿತಿಯಲ್ಲಿ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್