ಮೈಸೂರು : ನನ್ನ ಸಾವಿಗೆ ಉಪ ತಹಶೀಲ್ದಾರರೇ ಕಾರಣ ಎಂದು ಅವರ ಹೆಸರನ್ನು ಡೆತ್ ನೋಟಲ್ಲಿ ಬರೆದಿಟ್ಟು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
ಉಪತಹಶೀಲ್ದಾರ್ ಶಿವಕುಮಾರ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಹಿಂಸೆ ಕೊಡುತ್ತಿದ್ದಾರೆಂದು ಕಂಪ್ಯೂಟರ್ ಆಪರೇಟರ್ ಪರಮೇಶ್ ಎನ್ನುವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಪರಮೇಶನನ್ನು ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಂಪ್ಯೂಟರ್ ಆಪರೇಟರ್ ಪರಮೇಶ್ ಸಾವನ್ನಪ್ಪಿದ್ದಾರೆ. ನನ್ನ ಸಾವಿಗೆ ಉಪತಹಶಿಲ್ದಾರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುವಂತಹ ಪ್ರಕರಣವಾಗಿದೆ.