ಬೆಂಗಳೂರು: ಕರ್ನಾಟಕ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಅಚ್ಚರಿಯೆನ್ನುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ಈ ಕುರಿತಂತೆ ಎಐಎಸಿಸಿ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಪಟ್ಟಿ ಪ್ರಕಟಿಸಿದ್ದು, ಬಳ್ಳಾರಿ ಎಸ್ಟಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಈ ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನೂ ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಸುನೀಲ್ ಬೋಸ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.