ಬೆಂಗಳೂರು: ಕರ್ನಾಟಕದ ವಿಧಾನ ಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅಸ್ಸಾಂನ ಒಂದು ಕ್ಷೇತ್ರ ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿಲ್ಲ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು