ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ.
ಇದೀಗ ಬೆಂಗಳೂರು ನಗರದಲ್ಲಿ ಬೂತ್ ಲಿಸ್ಟ್ ಸರ್ವೇ ಮಾಡುತ್ತಿದ್ದ ಕಾರ್ಯಕರ್ತರನ್ನು ಪ್ರಶ್ನಿಸಿದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಈ ವೇಳೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು ಬೂತ್ ಲಿಸ್ಟ್ ಹಿಡಿದು ಮತದಾರರ ಸರ್ವೇ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನ ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡಿದ್ದರು. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡೂ ಕಡೆಯವರೂ ತಮ್ಮ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.