ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್, ಇದೀಗ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್ ಮಾಡಿದ್ದು, ಜನವರಿ 11 ರಿಂದ ಕಾಂಗ್ರೆಸ್ ಪಕ್ಷದ ಬಸ್ ಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಜನವರಿ 16 ರಿಂದ 19ರ ವರೆಗೆ ಹೊಸಪೇಟೆ, ಕೊಪ್ಪಳ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ. 20 ರಂದು ಒಂದು ದಿನ ವಿರಾಮ ಇರಲಿದೆ.ಜನೆವರಿ 21 ರಿಂದ 23ರ ವರೆಗೆ ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ. ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಯಾತ್ರೆಯನ್ನು ಯಶಸ್ವಿಯಾಗಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಬಸ್ ಯಾತ್ರೆಯ ಬಳಿಕ 2 ತಂಡಗಳನ್ನಾಗಿ ಮಾಡಿಕೊಂಡು 224 ಕ್ಷೇತ್ರಗಳಿಗೆ ಪ್ರವಾಸ ಮಾಡುತ್ತೇವೆ.ನಾನು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಹಾಗೂ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಕರಾವಳಿ ಹಾಗೂ ಬೆಂಗಳೂರು ಭಾಗದಲ್ಲಿ ನಾನು ಸಿದ್ದರಾಮಯ್ಯ ಇಬ್ಬರೂ ಒಟ್ಟಿಗೆ ಪ್ರವಾಸ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.
ILI, SARI ಸಮಸ್ಯೆ ಇರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ – ಸಚಿವ ಡಾ.ಕೆ.ಸುಧಾಕರ್
BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ಜಾಮೀನು ಮಂಜೂರು