ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ನಡೆಸಲಾಗಿದೆ. ಸಚಿವ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.