ಚಿತ್ರದುರ್ಗ: ಕಾಡುಗೊಲ್ಲರ ಪರವಾಗಿ ನಾನಿದ್ದೇನೆ, ಹಿಂದೆಯೂ ಸಹ ನಾನು ಸಂಸದನಾಗಿದ್ದಾಗ ಕಾಡುಗೊಲ್ಲರ ಪರವಾಗಿ ಕೆಲಸ ಮಾಡಿದ್ದೇನೆ ಎಂದು ತುಮಕೂರು ಲೋಕಸಭಾ ಕಾಂಗ್ರೇಸ್ಅಭ್ಯರ್ಥಿ ಮುದ್ದ ಹನುಮೇಗೌಡ ತಿಳಿಸಿದರು. ಈ ಮೂಲಕ ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಡುಗೊಲ್ಲ ಸಮುದಾಯದವರ ಮತಗಳ ಬೇಟೆಗೆ ಇಳಿಸಿದ್ದಾರೆ.
ನಗರದ ಕಾಡು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರು ಹಾಗೂ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಮಾಜಿ ಅದ್ಯಕ್ಷರಾದ ಸಿ ಶಿವುಯಾದವ್ ಅವರ ಮನೆಗೆ ಭೇಟಿ ಮಾಡಿ ಮಾತನಾಡಿದರು.
2014ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ ಟಿ ಗೆ ಸೇರಿಸುವ ಕುರಿತು ಕುಲ ಶಾಸ್ತ್ರ ಅಧ್ಯಯನವನ್ನು ಮಾಡಿಸಿ, ಅಂಗೀಕರಿಸಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತು. ಆ ಕಡತ ಕೇಂದ್ರ ಸರ್ಕಾರದಲ್ಲಿ ಹಾಗೆ ಕುಳಿತಿದೆ ನನ್ನನ್ನು ಆಯ್ಕೆ ಮಾಡಿ ಕಳಿಸಿದರೆ ಕೇಂದ್ರ ಸರ್ಕಾರದಲ್ಲಿ ಒತ್ತಡ ತಂದು ನಿಮ್ಮನ್ನು ಎಸ್ಟಿಗೆ ಸೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನಿಮ್ಮ ಜೊತೆಗೆ ನಾನಿರುತ್ತೇನೆ ಎಂದು ತಿಳಿಸಿದರು.
ಕಾಡುಗೊಲ್ಲ ಸಮುದಾಯಕ್ಕೆ ಸಂಬಂಧಪಟ್ಟಂತೆ ಸಂಸತ್ತನಲ್ಲಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.
ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ಒತ್ತಾಯಿಸಿದ್ದೆ ಅದೇ ಕಾಡುಗೊಲ್ಲ ಸಮುದಾಯದ ಪರವಾಗಿ ಕೆಲಸ ಮಾಡುತ್ತೇನೆ. ಈ ಬಾರಿ ನನಗೆ ನೀವು ಸಹಕಾರ ನೀಡಿ ಆಶೀರ್ವಾದ ಮಾಡಬೇಕು ಎಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಕಾಡುಗೊಲ್ಲ ಜನಾಂಗದ ಮುಖಂಡರು ಮತ್ತು ಜಿಲ್ಲಾ ವಕೀಲರ ಸಂಘದ ಮಾಜಿಅದ್ಯಕ್ಷರಾದ ಬಿ ಎಸ್ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅದ್ಯಕ್ಷರು ತಾಲ್ಲೂಕು ಅದ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.