ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸೀರ್ ಅಹ್ಮದ್ ಖಾನ್ ಅವರು ಗೆಲುವು ಸಾಧಿಸಿರುವುದಾಗಿ ಚುನಾವಣಾ ಆಯೋಗವು ಅಧಿಕೃತವಾಗಿ ಘೋಷಿಸಿದೆ.
ಈ ಸಂಬಂಧ ಫಾರಂ ನಂ.21ಇ ನಲ್ಲಿ ಅಧಿಕೃತ ಘೋಷಣೆ ಮಾಡಿರುವಂತ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಇಂದಿನ ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 87,308 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್ ಖಾನ್ ಅವರು 1,00,756 ಮತಗಳನ್ನು ಪಡೆದಿರುವುದಾಗಿ ತಿಳಿಸಿದೆ.
ಇನ್ನೂ ಸೋಷಿಯಲ್ ಪಾರ್ಟಿಯ ಕಜ್ಜದ್ ಮೊಹ್ಮದ್ದೀನ್ ಗುಂಡಗೇರಿ ಅವರು 664, ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು 1,876 ಮತಗಳನ್ನು, ಸ್ವಂತ್ರ ಅಭ್ಯರ್ಥಿ ಡಾ.ಜಿಹೆಚ್ ಇಮ್ರಾಪುರ್ 89, ಸಿದ್ದಪ್ಪ ಹೊಸಳ್ಳಿ 80, ಎಸ್ ಎಸ್ ಪಾಟೀಲ್ 184, ಶೆಟ್ಟಪ್ಪ ನೀಲಪ್ಪ ದೇಸಾಯಿ 463 ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದೆ.
ಒಟ್ಟು ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ 2,37,671 ಮತದಾನದಲ್ಲಿ 1,91,420 ಮತಗಳು ಸಿಂಧು ವಾಗಿದ್ದವು. 834 ನೋಟಾ ಮತಗಳು ಬಿದ್ದಿದ್ದಾವೆ. 25 ಮತಗಳು ಅಸಿಂಧುಗೊಂಡಿದ್ದಾವೆ ಎಂದಿದೆ.
ಅತಿ ಹೆಚ್ಚು ಮತವನ್ನು ಪಡೆದಂತ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್ ಖಾನ್ ಅವರು ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS