ಬೆಂಗಳೂರು: ಒಂದು ವೊಟ್ ಗೆ ಆರು ಸಾವಿರ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರ ನೀಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ದೂರು ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಮತಗಳನ್ನು ಕೊಳ್ಳುತ್ತದೆ ಎಂದು ದೆಹಲಿಯಲ್ಲಿ ದೂರು ಕೊಟ್ಟ ಬಳಿಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.
ಬಿಜೆಪಿ ಒಂದು ವೋಟ್ ಗೆ ಆರು ಸಾವಿರ ರೂಪಾಯಿ ನೀಡಿ ಖರೀದಿಸಲಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಆಯೋಗಕ್ಕೆ ದೂರು ನೀಡಿದ್ದೇವೆ. ಜಾರಕಹೊಳಿ ಹೇಳಿಕೆ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ, ಜೆ.ಪಿ ನಡ್ಡಾ, ನಳಿನ್ ಕುಮಾರ್ ಕಟೀಲು, ಪಿತೂರಿ ಇದೆ. ಹಾಗಾಗಿ ಸಂಪೂರ್ಣ ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ. ದೂರು ನೀಡಿದರೂ ಕರ್ನಾಟಕ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಈ ಬಗ್ಗೆಯೂ ಕೇಂದ್ರ ಚುನಾವಣಾ ಆಯೋಗಕ್ಕೆ ನಾವು ತಿಳಿಸಿದ್ದೇವೆ ಎಂದರು.
BIGG NEWS : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದ ಕೊಲೆಗಳಿಗೆ `RSS-BJP’ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ