ಬೆಂಗಳೂರು: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧಿಸಿ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ ʻಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆʼ ಎಸೆದಿರುವುದು ಎಂದು ಆಕ್ರೋಶ ವ್ಯಕ್ತಪaಡಿಸಿದ್ದಾರೆ.
BREAKING NEWS : ಬಿಹಾರ ಸಿಎಂ ‘ನಿತೀಶ್ ಕುಮಾರ್’ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿಯವರಲ್ಲ. ಕಾಂಗ್ರೆಸ್ಸಿಗರೇ ಮಾಡಿದ್ದಾರೆ.
ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಂದು ಹೇಳಿಕೊಂಡು ಪ್ರತಿಭಟನೆಯ ವೇಳೆ ಈ ಕೃತ್ಯವೆಸಗಿದ್ದಾರೆ ಎಂದರು.
BREAKING NEWS : ಬಿಹಾರ ಸಿಎಂ ‘ನಿತೀಶ್ ಕುಮಾರ್’ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಕಾಂಗ್ರೆಸ್ ನಲ್ಲಿಯೇ ಸಿದ್ದರಾಮಯ್ಯನವರ ವಿರೋಧಿಗಳಿದ್ದಾರೆ. ಅವರ ಪಕ್ಷದವರೇ ಮೊಟ್ಟೆ ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಕೃತ್ಯವಾಗಲು ಸಾಧ್ಯವಿಲ್ಲ ಎಂದು ಹೇಳಿದರು.