ಕಲಬುರಗಿ : ಕಲ್ಬುರ್ಗಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಲ್ಬುರ್ಗಿ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೇಯರ್ ಹಾಗೂ ಉಪಮೇಯರ್ ವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಿದೆ.
ಹೌದು ಇಂದು ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗು ಉಪಮೇಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಯಲ್ಲಪ್ಪ ನಾಯಿಕೋಡಿ ಅವರು ಮೇಯರ್ ಆಗಿ ಹಾಗೂ ಹೀನಾ ಬೇಗಂ ಅವರು ಉಪಮೆಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ ಹಿನ್ನೆಲೆಯಲ್ಲಿ ಯಲ್ಲಪ್ಪ ನಾಯಿಕೋಡಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನು ಉಪಮೇಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಮೈತ್ರಿ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. ಹೀಗಾಗಿ ಉಪಮೇಯರಾಗಿ ಅವಿರೋಧವಾಗಿ ಹೀನಬೇಗಂ ಆಯ್ಕೆಯಾಗಿದ್ದಾರೆ. ಕಲಬುರ್ಗಿ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಅವಿರೋಧ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.