ನವದೆಹಲಿ: ಟೆಲಿವಿಷನ್ ಚಾನೆಲ್ ಗಳಲ್ಲಿ ಯಾವುದೇ ಲೋಕಸಭಾ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಟಿಆರ್ ಪಿಗಾಗಿ ಊಹಾಪೋಹಗಳು ಮತ್ತು ಕೆಸರೆರಚಾಟದಲ್ಲಿ ತೊಡಗಲು ಬಯಸುವುದಿಲ್ಲ ಎಂದು ಹೇಳಿದೆ.
ಮತದಾರರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು ಸುರಕ್ಷಿತವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದರು.
ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು, ಟಿಆರ್ಪಿಗಾಗಿ ಊಹಾಪೋಹಗಳು ಮತ್ತು ಕೆಸರೆರಚಾಟದಲ್ಲಿ ತೊಡಗಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ” ಎಂದು ಅವರು ಎಕ್ಸ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
#WATCH | Congress leader Pawan Khera says, "What's the point of speculation? Why should we indulge in meaningless speculation just to increase the TRPs of channels or to there is some force? There are some forces which are involved in betting. Why should we be a part of that?… https://t.co/pB5ndU7MvG pic.twitter.com/pswZCDJGpY
— ANI (@ANI) May 31, 2024
ಚುನಾವಣೋತ್ತರ ಸಮೀಕ್ಷೆಗಳ ಚರ್ಚೆಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದಾಗಿರಬೇಕು. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ” ಎಂದು ಖೇರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಕ್ಷದೊಳಗಿನ ಸಮಾಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು