ಮೈಸೂರು : ರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೆ ಕಾಂಗ್ರೆಸ್. ಕಾಂಗ್ರೆಸ್ಸಿಗರೇ ಪೂಜಿಸಿದ್ದರೆ ಬಿಜೆಪಿಗೆ ಈ ಪೇಟೆಂಟ್ ಸಿಗುತ್ತಿತ್ತು. ಕಾಂಗ್ರೆಸ್ನವರಿಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದೆಯಾ ಅಥವಾ ರಾವಣ ರಾಜ್ಯದ ಮೇಲೆ ನಂಬಿಕೆ ಇದೆಯಾ ಅವರನ್ನೇ ಕೇಳಿ ಕಾಂಗ್ರೆಸ್ ಗೆ ಗಾಂಧೀಜಿ ರಾಮರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಾಕ್ಷತೆಗೆ ಅನ್ನ ಭಾಗ್ಯ ಅಕ್ಕಿ ಬಳಸಿದ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಅವರು, ಮಂತ್ರಾಕ್ಷತೆ ಸ್ವೀಕರಿಸಿದವರಿಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ ಅಕ್ಷತೆ ಬಗ್ಗೆ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ ಅಯೋಧ್ಯೆಗೆ ಹೋಗುವುದು ಬಿಡುವುದು ಸಿಎಂ ಗೆ ಬಿಟ್ಟ ವಿಚಾರ ಎಂದು ಕಿಡಿಕಾರಿದರು.
ಪ್ರತಾಪ್ ಸಿಂಹ ನ್ಯಾಷನಲ್ ಲೀಡರ್ ಎಂಬ ಯತಿಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ ಎಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.ಬರವಣಿಗೆಯ ಮೂಲಕ ಹೆಸರು ಸಂಪಾದಿಸಿ ನಾನು ಈ ಸ್ಥಾನಕ್ಕೆ ಬಂದಿದ್ದೇನೆ ಎಂದು ಅವರು ತಿಳಿಸಿದರು.
ಖಾಸಗಿ ಲ್ಯಾಬಿಗೆ ಗುತ್ತಿಗೆ ಪಡೆದುಕೊಳ್ಳುವವರು ನ್ಯಾಷನಲ್ ಲೀಡರ್. ಅಪ್ಪನ ನೆಲೆ ಬಿಡಿಸಿ ಬಾದಾಮಿಗೆ ಓಡಿಸುವವರು ನ್ಯಾಷನಲ್ ಲೀಡರ್. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತ ಮುಖ್ಯಮಂತ್ರಿ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್. ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಡಾ. ಯತೀಂದ್ರ ಸಿದ್ದರಾಮಯ್ಯ ಎಂದು ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದರು.