ಬೆಂಗಳೂರು : ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಂಕ್ರಾಂತಿ ಹಬ್ಬದ ಶುಭಾಶಯಗಳು
ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷ ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
BREAKING: ಖ್ಯಾತ ಮಲಯಾಳಂ ಸಂಗೀತ ನಿರ್ದೇಶಕ ‘ಕೆ.ಜೆ. ಜಾಯ್’ ಇನ್ನಿಲ್ಲ | K J Joy No More
BIG NEWS: ರಾಜ್ಯದಲ್ಲಿ ‘ಸಂಕ್ರಾಂತಿ ಹಬ್ಬ’ದ ದಿನವೇ ‘ಸರಣಿ ದುರಂತ’: ಒಂದೇ ದಿನ ಅಪಘಾತಕ್ಕೆ ’11 ಮಂದಿ’ ಬಲಿ