ಬೆಂಗಳೂರು: ಪಿಎಸ್ಐ ಹಗರಣದ ಕಿಂಗ್ ಪಿನ್ ಗಳ ಮನೆಗೆ ಭೇಟಿ ನೀಡಿ, ಅವರ ನಿವಾಸದಲ್ಲಿ ಊಟ ಮಾಡಿದಂತ ಸಂಸದ ಉಮೇಶ್ ಜಾಧವ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ.
ಇಂದು ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳೊಂದಿಗೆ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಗುರುತಿಸಿಕೊಂಡಿರುವ ವಿರುದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಹಗರಣದ ಪ್ರ ಮುಖ ಆರೋಪಿಗಳಾದ ಆರ್.ಡಿ.ಪಾಟೀಲ ಮತ್ತು ದಿವ್ಯಾ ಹಾಗರಗಿ ಷರತ್ತು ಬದ್ಧ ಜಾಮೀನಿನ ಮೇಲೆ ಇದ್ದಾರೆ. ಅವರ ಮನೆಗೆ ಲೋಕಸಭಾ ಸದಸ್ಯ ಉಮೇಶ್ ಜಾಧವ್ ತೆರಳಿ ಭೋಜನ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ಅವರೇ ಹಂಚಿಕೊಂಡಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರಸ್ ಪಕ್ಷ ತನ್ನ ದೂರಿನಲ್ಲಿ ಆಗ್ರಹಿಸಿದೆ.
ಕೆಪಿಸಿಸಿ ಕಾನೂನು ವಿಭಾಗದ ಉಪಾಧ್ಯಕ್ಷ ಎನ್ ದಿವಾಕರ್, ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಯೋಗ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.
BREAKING: ‘ಚುನಾವಣಾ ನೀತಿ ಸಂಹಿತೆ’ ಉಲ್ಲಂಘನೆ: ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ‘FIR’ ದಾಖಲು