ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಂಬಂಧ ನಿನ್ನೆ ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಕರ್ನಾಟಕ 9 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಬಹುತೇಕ ಫೈಲನ್ ಮಾಡಲಾಗಿದ್ದು, ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ.
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿಯಿಂದ ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಸಿಇಸಿ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ಅಭ್ಯರ್ಥಿಗಳನ್ನು ಫೈನಲ್ ಮಾಡುವ ಸಂಬಂಧ ನಡೆಸಲಾಗಿತ್ತು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಭೆಯಲ್ಲಿ ಭಾಗಿಯಾಗಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯಲ್ಲಿ ಭಾಗಿಯಾಗಿ, ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಾಗಿತ್ತು.
ದೆಹಲಿಯಲ್ಲಿ ನಡೆದ ಸರಣಿ ಸಭಎಯ ನಂತ್ರ ಕರ್ನಾಟಕದ 9 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ ಸುರೇಶ್ ಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್ ಅವರಿಗೆ ಟಿಕೆಟ್ ನೀಡಿರೋ ಬಗ್ಗೆ ತಿಳಿದು ಬಂದಿದೆ.
ಹೀಗಿದೆ ಕರ್ನಾಟಕದ 9 ಲೋಕಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿರುವಂತ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
- ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
- ಮಂಡ್ಯ- ಸ್ಟಾರ್ ಚಂದ್ರು
- ವಿಜಯಪುರ- ರಾಜು ಹುಲುಗೂರು
- ಬೀದರ್-ರಾಜಶೇಕರ್ ಪಾಟೀಲ್
- ಹಾಸನ- ಶ್ರೇಯಸ್ ಪಾಟೀಲ್
- ತುಮಕೂರು- ಮುದ್ದೆ ಹನುಮೇ ಗೌಡ
- ಚಿತ್ರದುರ್ಗ- ಬಿಎನ್ ಚಂದ್ರಪ್ಪ
- ಕಲಬುರಗಿ- ರಾಧಾ ಕೃಷ್ಣ(ಮಲ್ಲಿಕಾರ್ಜುನ ಖರ್ಗೆ ಅಳಿಯ)
- ರಾಯಚೂರು- ಕುಮಾರ್ ನಾಯ್ಕ್(ನಿವೃತ್ತಿ ಕೆಎಎಸ್ ಅಧಿಕಾರಿ)