ಮೈಸೂರು: ರಾಮನ ಪೇಟೆಂಟ್ ಅನ್ನು ಬಿಜೆಪಿ ಗೆ ಕೊಟ್ಟಿದ್ದೆ ಕಾಂಗ್ರೆಸ್. ರಾಮನನ್ನು ಕಾಂಗ್ರೆಸಿಗರೆ ಭಕ್ತಿ ಭಾವದಿಂದ ಪೂಜಿಸಿದ್ದರೆ. ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು ? ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸದ ಕಾಂಗ್ರೆಸ್ ಗೆ ರಾಮ ಏನೂ ಬಿಜೆಪಿ ಪೇಟೆಂಟ್ ಹಾ ಎಂದು ಕೇಳುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದ್ಯಾ? ರಾವಣ ರಾಜ್ಯದ ಮೇಲೆ ನಂಬಿಕೆ ಇದ್ಯಾ ಅವರನ್ನೇ ಕೇಳಿ ? ಕಾಂಗ್ರೆಸ್ ಗೆ ಗಾಂಧೀಜಿಯ ರಾಮ ರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.
ಅಯೋಧ್ಯೆ ಮಂತ್ರಾಕ್ಷತೆ ಗೆ ಅನ್ನಭಾಗ್ಯ ಅಕ್ಕಿ ಬಳಸಿದ ಆರೋಪ ವಿಚಾರವಾಗಿ ಮಾತನಾಡಿದಂತ ಅವರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆ ಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ ? ಅಕ್ಷತೆ, ಗೋತ್ರದ ಮೇಲೆ ಕಾಂಗ್ರೆಸ್ ಗೆ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ. ಅಯೋಧ್ಯೆಗೆ ಹೋಗುವುದು ಬಿಡುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂಬುದಾಗಿ ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ತಿಳಿಸಿದರು.
BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’
BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ