ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆಗೆ ಮುಂದಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ 136 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇದೇ ಒಂದು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಸಜ್ಜಾಗಿದೆ.
ಬೆಂಗಳೂರು : ಪಾರ್ಕಿಂಗ್ ವಿಚಾರಕ್ಕೆ ಮಾರಾಮಾರಿ : ಮನೆಯವರ ಗಲಾಟೆ ಮಧ್ಯ ಜಖಂಗೊಂಡ ಕಾರು
ಹೌದು ಇದೀಗ ಕಾಂಗ್ರೆಸ್ ಪಕ್ಷ ಪ್ರತಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆಗಳ ಕುರಿತಾಗಿ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಕ್ರಮವನ್ನು ನಡೆಸಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಅಲರ್ಟ್ ಆಗಿದ್ದು ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜನೆ ಮಾಡಿದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ದಲ್ಲಿ ಇಂದು ಮಾಗಡಿಯಲ್ಲಿ ಗ್ರಹಲಕ್ಷ್ಮಿ ಸಮಾವೇಶ ಆಯೋಜಿಸಲಾಗಿದೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಹತ್ತಿರ ಬಳಸಲು ಮುಂದಾಗಿದೆ ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಟಾರ್ಗೆಟ್ ಮಾಡಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಪ್ರತಿ ಜಿಲ್ಲೆಯಲು ಸಮಾವೇಶ ನಡೆಸಲು ಕಾಂಗ್ರೆಸ್ ನಿಂದ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ