Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

​ಯಾರು ಈ ಎಸ್. ಕೀರ್ತನಾ? ವಿಜಯ್ ಸಂಪುಟದ ಏಕೈಕ ಮಹಿಳಾ ಮಂತ್ರಿ; ಹಿಂದಿ ಭಾಷಣದ ಮೂಲಕ ರಾಷ್ಟ್ರಮಟ್ಟದಲ್ಲಿ ಸದ್ದು!

​’ಇದು ಕೆಲಸವಲ್ಲ, ಚಿತ್ರಹಿಂಸೆ!’: ಹತ್ತು ನಿಮಿಷಕ್ಕೊಮ್ಮೆ ಸ್ಕ್ರೀನ್‌ಶಾಟ್, ಸದಾ ವೆಬ್‌ಕ್ಯಾಮ್ ಆನ್; ಕಠಿಣ ನಿಯಮದ ಕೆಲಸಕ್ಕೆ ಮಹಿಳೆ ‘ನೋ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ
KARNATAKA

ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ

By ವಸಂತ್‌ ಬಿ ಈಶ್ವರಗೆರೆ

ಹುಬ್ಬಳ್ಳಿ: ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅತಿ ಹೆಚ್ಚು ಅನುಭವಿ ಮುಖ್ಯಮಂತ್ರಿ ಇದ್ದರೂ ರಾಜ್ಯದ ಅಭಿವೃದ್ಧಿಗೆ ಬಿಡಿಗಾಸು ನೀಡಿಲ್ಲ; ಇದುವರೆಗೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಎಂದು ಆಕ್ಷೇಪಿಸಿದರು.

ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಮಯದಲ್ಲಿ ಪರಿಹಾರ ಇರಲಿ; ಕನಿಷ್ಠ ಪಕ್ಷ ಸಚಿವರು ಆ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದರು. ರಾಜ್ಯವು ಆರ್ಥಿಕ ದಿವಾಳಿಯತ್ತ ರಾಜ್ಯ ಸಾಗುತ್ತಿದೆ.

ಗ್ಯಾರಂಟಿ ಯೋಜನೆಗೆ ಹಣ ನೀಡಲು ಆಗುತ್ತಿಲ್ಲ. ಒಂದು ಕಡೆ ಬೆಲೆ ಏರಿಕೆ ಮಾಡಿ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ದಿನಸಿ ಅಂಗಡಿಯಲ್ಲಿ ಸಹ ಹೆಂಡ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಒತ್ತಡ ಕಾರಣ. ಸಿದ್ದರಾಮಯ್ಯರ ಸರ್ಕಾರ ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಮುಂದಾಗಿದೆ. ಇದು ರಾಜ್ಯದ ದುರ್ದೈವ ಎಂದು ಆರೋಪಿಸಿದರು.

ಇಲ್ಲಿ ಕಪಟನಾಟಕ ಮಾಡಿ ಮನೆ ಹಸ್ತಾಂತರ ಕಾರ್ಯಕ್ರಮ ಮಾಡಿದ್ದಾರೆ. ಆದರೆ ಇದು ಯಡಿಯೂರಪ್ಪ ಕಾಲದಲ್ಲಿ ಆಗಿದ್ದುದು ಎಂದು ಗಮನ ಸೆಳೆದರು. ಬಿಜೆಪಿ ಮಹಾನಗರ ಪಾಲಿಕೆ ಅಧಿಕಾರದಲ್ಲಿದ್ದಾಗ 16 ಎಕರೆ ಜಾಗವನ್ನು ಸ್ಲಂ ಬೋರ್ಡ್ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರವೂ ಆರ್ಥಿಕ ಸಹಾಯ ಮಾಡಿದೆ. ಸಿಎಂ ತಾವೇನೋ ಕಡಿದು ಕಟ್ಟೆ ಹಾಕಿ ದೊಡ್ಡದು ಭಾಷಣ ಮಾಡಿದ್ದಾರೆ ಎಂದು ಟೀಕಿಸಿದರು.

ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ..

ಜಮೀರ್ ಅವರು ಅಬಕಾರಿ ಇಲಾಖೆ ಜೊತೆಗೆ ಮಾತನಾಡಿ ಕಾರ್ಯಕ್ರಮ ಹೆಸರಿನಲ್ಲಿ ಲಿಕ್ಕರ್ ಮಾರಾಟ ಮಾಡಲು ಉತ್ತೇಜಿಸಿದ್ದಾರೆ. ಇದು ನಿರ್ಲಜ್ಜ, ಲಜ್ಜೆಗೆಟ್ಟ ಸರ್ಕಾರ. ಇವರು ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ, ಹಿಂದ ಸಮಾಜ ಮರೆತು ಬರೀ ಅಲ್ಪಸಂಖ್ಯಾತರ ಓಲೈಕೆ ಮಾಡಲು ಮುಂದಾಗಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣದ ನೀತಿ ಕಾಂಗ್ರೆಸ್ಸಿನದು ಎಂದು ದೂರಿದರು.

ಗೂಂಡಾಗಿರಿ ನಡೆಸುವ ರಾಜ್ಯ ಸರ್ಕಾರ

ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅಬಕಾರಿ ಇಲಾಖೆಯಲ್ಲಿ ಕಾಳದಂಧೆ ನಡೆಯುತ್ತಿದೆ. ಕಳ್ಳದಂಧೆ, ಮಟ್ಕಾ ಲಂಚದ ಹಣದ ಮೇಲೆ ರಾಜ್ಯ ಸರ್ಕಾರ ಬದುಕುತ್ತಿದೆ ಎಂದು ತಿಳಿಸಿದರು. ತರಕೇರಿಯಲ್ಲಿ ಭಾಷಣಕ್ಕೂ ಮುನ್ನವೇ ಪೊಲೀಸ್ ನೋಟಿಸ್ ನೀಡಲಾಗಿದೆ ಎಂದ ಅವರು, ನಾವು ಯಾವ ರಾಜ್ಯದಲ್ಲಿ ಇದ್ದೇವೆ? ನಾವೇನು ಪಾಕಿಸ್ತಾನ ಅಥವಾ ಬಾಂಗ್ಲಾದೇಶದಲ್ಲಿ ಇದ್ದೇವಾ? ಎಂದು ಕೇಳಿದರು. ದ್ವೇಷ ಭಾಷಣ ಕಾಯ್ದೆ ಮೂಲಕ ರಾಜ್ಯ ಸರ್ಕಾರ ಗೂಂಡಾಗಿರಿ ನಡೆಸುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಗಾಂಧಿ ಕುಟುಂಬ ಯಾವ ರೀತಿಯಲ್ಲಿ ಈ ಹಿಂದೆ ಯಾವ ರೀತಿಯಲ್ಲಿ ರಾಜ್ಯಪಾಲರನ್ನು ನಡೆಸಿಕೊಂಡಿತ್ತು ಎಂಬುದನ್ನು ನಾವು ನೋಡಿದ್ದೆವೆ; ದೇಶದ ಗೌರವಾನ್ವಿತ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿದ್ದು ನಕಲಿ ಗಾಂಧಿ ಕುಟುಂಬ ಎಂದು ಅವರು ಟೀಕಿಸಿದರು.

BREAKING: ಹಿರಿಯ ಪತ್ರಕರ್ತ, ಲೇಖಕ ಮಾರ್ಕ್ ಟಲ್ಲಿ ಇನ್ನಿಲ್ಲ | Mark Tully

ಸ್ವಿಮ್ಮಿಂಗ್ ಪೂಲ್ ನಲ್ಲಿ ಮಹಿಳೆ ಶವವಾಗಿ ಪತ್ತೆ: ಪತಿಯಿಂದಲೇ ಕೊಲೆ ಶಂಕೆ

Share. Facebook Twitter LinkedIn WhatsApp Email

Related Posts

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

2 Mins Read

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

1 Min Read

ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆ: ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ

1 Min Read
Recent News

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

​ಯಾರು ಈ ಎಸ್. ಕೀರ್ತನಾ? ವಿಜಯ್ ಸಂಪುಟದ ಏಕೈಕ ಮಹಿಳಾ ಮಂತ್ರಿ; ಹಿಂದಿ ಭಾಷಣದ ಮೂಲಕ ರಾಷ್ಟ್ರಮಟ್ಟದಲ್ಲಿ ಸದ್ದು!

​’ಇದು ಕೆಲಸವಲ್ಲ, ಚಿತ್ರಹಿಂಸೆ!’: ಹತ್ತು ನಿಮಿಷಕ್ಕೊಮ್ಮೆ ಸ್ಕ್ರೀನ್‌ಶಾಟ್, ಸದಾ ವೆಬ್‌ಕ್ಯಾಮ್ ಆನ್; ಕಠಿಣ ನಿಯಮದ ಕೆಲಸಕ್ಕೆ ಮಹಿಳೆ ‘ನೋ’

‘ನೋ ಟಚ್, ನೋ ಡಸ್ಟ್’: CBSE ಇತಿಹಾಸದಲ್ಲೇ ಮೊದಲ ಬಾರಿಗೆ ‘ಡಿಜಿಟಲ್ ಮೌಲ್ಯಮಾಪನ’ ಆರಂಭ!

State News
KARNATAKA

ಗಿಗ್ ಕಾರ್ಮಿಕರ ಬಾಳಿಗೆ ಆಸರೆಯಾದ ಕಾಂಗ್ರೆಸ್ ಸರ್ಕಾರ: ಚುನಾವಣೆ ಮುನ್ನ ನೀಡಿದ್ದ ಭರವಸೆ ಈಡೇರಿಕೆ

By ವಸಂತ್‌ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸ್ವಿಗ್ಗಿ, ಜೊಮ್ಯಾಟೊ, ಅಮೆಜಾನ್ ಹಾಗೂ ಓಲಾ-ಉಬರ್‌ನಂತಹ ಸಂಸ್ಥೆಗಳಲ್ಲಿ ಕೆಲಸ ಮಾಡುವ ‘ಗಿಗ್ ಕಾರ್ಮಿಕರ’ ಹಿತರಕ್ಷಣೆ ಮಾಡುವಲ್ಲಿ ಕರ್ನಾಟಕದ ಕಾಂಗ್ರೆಸ್…

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆ: ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.