Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಕಾಂಗ್ರೆಸ್ ಸರ್ಕಾರ ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ: ಬಿವೈ ವಿಜಯೇಂದ್ರ
KARNATAKA

ರಾಜ್ಯ ಕಾಂಗ್ರೆಸ್ ಸರ್ಕಾರ ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ: ಬಿವೈ ವಿಜಯೇಂದ್ರ

By kannadanewsnow0912/04/2025 7:50 PM

ಶಿವಮೊಗ್ಗ: ಸುಮಾರು 50ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.

ತೀವ್ರ ಮಳೆಯ ನಡುವೆ ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ ಮಾಡುವ ಕ್ರಮ ಎಂದು ಟೀಕಿಸಿದರು.

ಮುಸ್ಲಿಂ ಯುವಜನರು ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ತೆರಳುವುದಾದರೆ 20 ಲಕ್ಷದ ಬದಲು 30 ಲಕ್ಷ ಕೊಡುತ್ತಿದ್ದಾರೆ. ನಿಮಗೆ ಹಿಂದೂಗಳು ಕಾಣುವುದಿಲ್ಲವೇ? ನಮ್ಮ ಹಿಂದೂಗಳು ನಿಮಗೆ ಮಾಡಿದ ಅನ್ಯಾಯವಾದರೂ ಏನು ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಮುಸಲ್ಮಾನರನ್ನು ಓಲೈಸುವ ಮತ್ತು ಹಿಂದೂಗಳಿಗೆ ಅವಮಾನ ಮಾಡುವ ರಾಜಕೀಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದಕ್ಕಾಗಿ ಬಿಜೆಪಿ ಜನಾಕ್ರೋಶ ಯಾತ್ರೆ ಪ್ರಾರಂಭಿಸಿದೆ ಎಂದು ನುಡಿದರು.

ಹಾಲಿನ ದರ 9 ರೂ. ಹೆಚ್ಚಿಸಿದ್ದು, ಬಡಜನರು ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಲು ಸಾಧ್ಯ ಆಗುತ್ತಿಲ್ಲ. ಕಾಂಗ್ರೆಸ್ ಸರಕಾರವು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ರೈತರು ಟ್ರಾನ್ಸ್‍ಫಾರ್ಮರ್ ಹಾಕಿಸಿಕೊಳ್ಳಲು ಹಿಂದೆ ಬಿಜೆಪಿ ಸರಕಾರ ಇದ್ದಾಗ 25 ಸಾವಿರ ಖರ್ಚು ಮಾಡಬೇಕಿದ್ದರೆ, ಈಗ ಸಿದ್ದರಾಮಯ್ಯನವರ ರೈತಪರ ಎನ್ನುವ ಸರಕಾರ ಬಂದ ಬಳಿಕ 2.5 ರಿಂದ 3 ಲಕ್ಷ ಹಣವನ್ನು ರೈತರು ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು. ದಲಿತರ ಅಭ್ಯುದಯಕ್ಕೆ ಬಳಕೆ ಆಗಬೇಕಿದ್ದ 38 ಸಾವಿರ ಕೋಟಿ ಎಸ್‍ಇಟಿ, ಟಿಎಸ್‍ಪಿ ಹಣವನ್ನು ಸಿದ್ದರಾಮಯ್ಯನವರು ದುರುಪಯೋಗ ಮಾಡುತ್ತಿದ್ದಾರೆ ಎಂದು ದೂರಿದರು.

ನರೇಂದ್ರ ಮೋದಿಯವರ ಕಳೆದ 10 ವರ್ಷಗಳ ದೇಶದ ಸಮರ್ಥ ಆಡಳಿತದ ಪರಿಣಾಮವಾಗಿ ಜಗತ್ತಿನ 5ನೇ ಪ್ರಮುಖ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ ಎಂದು ಅವರು ವಿವರಿಸಿದರು.

ಚುನಾವಣೆಗಾಗಿ ಈ ಹೋರಾಟವಲ್ಲ; ಅಧಿಕಾರ ಹಿಡಿದ ರಾಜ್ಯದ ಕಾಂಗ್ರೆಸ್ ಸರಕಾರ ಜನವಿರೋಧಿಯಾಗಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈ ಹಿಂದೂ ವಿರೋಧಿ ಸರಕಾರವನ್ನು ಕಿತ್ತು ಹಾಕುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ ಇಂದು “ರಾಮಣ್ಣ ಶ್ರೇಷ್ಠಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಗೋಪಿ ವೃತ್ತ” ತಲುಪಿತು. ಬಳಿಕ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಮತ್ತು ಶಾಸಕ ಅರಗ ಜ್ಞಾನೇಂದ್ರ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಶಾಸಕ ಚನ್ನಬಸಪ್ಪ, ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ, ಮಾಜಿ ಶಾಸಕರಾದ ಕುಮಾರಸ್ವಾಮಿ, ಅಶೋಕ್ ನಾಯಕ್, ವಿಧಾನಪರಿಷತ್ ಮಾಜಿ ಸದಸ್ಯ ರುದ್ರೇಗೌಡ, ಪ್ರಕೋಷ್ಟಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

BIG BREAKING: ರಾಜ್ಯದಲ್ಲಿ ‘ಜಾತಿಗಣತಿ ವರದಿ’ಯ ಅಂಕಿ ಅಂಶ ಬಹಿರಂಗ: ಹೀಗಿದೆ ‘ಪ್ರವರ್ಗವಾರು ಜನಸಂಖ್ಯೆ’ ಪ್ರಮಾಣ

Watch Video: ಜನಸಾಮಾನ್ಯರಂತೆ ‘ಸಾರಿಗೆ ಬಸ್’ನಲ್ಲಿ ಪ್ರಯಾಣಿಸಿ ಗಮನ ಸೆಳೆದ ‘ಕಂದಾಯ ಸಚಿವ ಕೃಷ್ಣಬೈರೇಗೌಡ’

BREAKING: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಸೇರಿದ 661 ಕೋಟಿ ಆಸ್ತಿ ಜಪ್ತಿ

Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.