ಕಲಬುರಗಿ : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಲೋಕಸಭೆ ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿ ಆಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಶಿವಾನಂದ ಪಾಟೀಲ್ ಇಬ್ಬರೂ ಸೇರಿ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು, ಚಾಮರಾಜನಗರದಲ್ಲಿ 60 ಸಾವಿರ ಲೀಡ್ ಕೊಡದಿದ್ದರೆ ನನ್ನ ಕುರ್ಚಿ ಹೋಗುತ್ತದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇವೆನ್ನಲ್ಲ ನೋಡಿದ್ರೆ ಚುನಾವಣೆ ಬಳಿಕ ಕುರ್ಚಿ ಹೋಗೋದು ನಿಶ್ಚಿತ ಎಂದರು.