ಬೆಂಗಳೂರು: ಮೊನ್ನೆ ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘಟನೆ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ರಾಮೇಶ್ವರಂ ಕೆಫೆಯ ಬ್ಲಾಸ್ಟ್ ಸಂಭವಿಸಿದೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿಗಳಿಂದ, ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ತಂದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ವಿಜಯೇಂದ್ರ ಅವರು ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ ನಂತರ ಒಂದಿಲ್ಲೊಂದು ಘಟನೆಗಳು ನಡೆಯುತ್ತಿವೆ. ಸರಣಿ ಘಟನೆಗಳು ಒಂದಾದ ಮೇಲೆ ಒಂದರಂತೆ ರಾಜ್ಯದಲ್ಲಿ ನಡೆಯುತ್ತ ಬಂದಿವೆ. ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್‍ನಿಂದ ಶುರುವಾದ ಘಟನೆಗಳು ಶಿವಮೊಗ್ಗದಲ್ಲಿ ಟಿಪ್ಪು ಜಯಂತಿ ಮುಖೇನ ಹಿಂದೂಗಳ ಮನೆಗಳಿಗೆ ನುಗ್ಗಿ, ಮನೆಗಳ ಮೇಲೆ ಕಲ್ಲೆಸೆದು, ಹಿಂದೂಗಳನ್ನು ಬೆದರಿಸುವ ಘಟನೆಯೂ ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ನಡೆದಿದೆ ಎಂದು ವಿವರಿಸಿದರು.

ಡಿ.ಜೆ.ಹಳ್ಳಿ- ಕೆ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರ ವಿರುದ್ಧ ಕೇಸು ಹಾಕಿದ್ದು ಅದನ್ನು ರದ್ದು ಮಾಡುವಂತೆ ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು ಗೃಹ ಸಚಿವರಿಗೆ ಒತ್ತಾಯಿಸಿದ್ದರು. ಮೊನ್ನೆ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಘಟನೆ ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಎಲ್ಲರನ್ನೂ ಕೂಡ ಬೆಚ್ಚಿ ಬೀಳಿಸಿದೆ. ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಒಳಗಡೆ ರಾಜ್ಯಸಭಾ ಚುನಾವಣೆ ನಡೆದ ನಂತರ ಗೆದ್ದು ಬಂದ ಕಾಂಗ್ರೆಸ್ ಸಂಸದ, ಅವರ ಹಿಂಬಾಲಕರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಎಲ್ಲವನ್ನೂ ಸಹ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ, ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಇವರ ಮಂತ್ರಿಮಂಡಲ ಸಂಪೂರ್ಣವಾಗಿ ಸಹಿಸಿಕೊಂಡು ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಪಕ್ಷದ ಮೈ ಬ್ರದರ್ ಪಾಲಿಸಿಯಿಂದ ರಾಜ್ಯದ ಜನರ ರಕ್ಷಣೆ ವಿಚಾರದಲ್ಲಿ ದೊಡ್ಡ ಯಕ್ಷಪ್ರಶ್ನೆ ಉದ್ಭವವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ಸರಕಾರದ ನೀತಿಗಳು ಕನ್ನಡಿಗರ ಸುರಕ್ಷತೆ ವಿಷಯದಲ್ಲಿ ಪ್ರಶ್ನಾರ್ಥಕ ಚಿಹ್ನೆಯನ್ನು ಹುಟ್ಟುಹಾಕಿದೆ ಎಂದು ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ದೇಶದ್ರೋಹಿಗಳನ್ನು, ಸಮಾಜವಿರೋಧಿ ದುಷ್ಕøತ್ಯ ಎಸಗುವವರನ್ನು ರಕ್ಷಿಸುವ ಧೋರಣೆಯನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಸರಕಾರವು ಅಲ್ಪಸಂಖ್ಯಾತರ ಓಲೈಕೆ ನೀತಿಯನ್ನು ತನ್ನದಾಗಿಸಿಕೊಂಡಿದೆ. ಇದರ ಪರಿಣಾಮವನ್ನು ರಾಜ್ಯದ ಜನರು ಎದುರಿಸಬೇಕಿದೆ ಎಂದರು.

‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ

ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

Share.
Exit mobile version