ಧಾರವಾಡ :ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿದ ಮಗನಂತೆ ಆಗಿದೆ. ರಾಜ್ಯದ ಆಡಳಿತ ನಿಷ್ಕ್ರಿಯಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ಸಿಎಂ ಸಿದ್ದರಾಮಯ್ಯ ವಿಫಲ ಆಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
ಧಾರವಾಡದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ಇದರ ಎಲ್ಲ ಪರಿಣಾಮ ರಾಜ್ಯದ ಆಡಳಿತ ಮೇಲೆ ಆಗಿದೆ. ರಾಜ್ಯದ ಆಡಳಿತ ನಿಷ್ಕ್ರಿಯಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ವಿಫಲ ಆಗಿದ್ದಾರೆ. ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಆದರೆ ಬೆಲೆ ಏರಿಕೆ ಮಾಡಿ ಜನರಿಂದ ಹಣ ಪಡೆದು ಜನರಿಗೆ ಕೊಡುತ್ತಿದ್ದಾರೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಸಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ವಿಫಲ ಮುಖ್ಯಮಂತ್ರಿ ಎಂದು ಜೋಶಿ ಹರಿಹಾಯ್ದರು.ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ.
ಹೆಚ್ಚು ಡಿಸಿಎಂಗಳನ್ನು ಸೃಷ್ಟಿ ಮಾಡಬೇಕು ಎಂದು ಸಿಎಂ ತಮ್ಮ ಅನುಯಾಯಿಗಳಿಂದ ಒತ್ತಾಯ ಮಾಡಿಸಿದರೆ, ಇತ್ತ ಸಿಎಂ ಅವರನ್ನೇ ಬದಲಿ ಮಾಡಬೇಕು ಬಳಿಕ ಹೆಚ್ಚುವರಿ ಡಿಸಿಎಂರನ್ನು ಮಾಡಿಕೊಳ್ಳಬಹುದು ಎಂಬ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರ ದಿಕ್ಕು ತಪ್ಪಿದಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.