ಹಾವೇರಿ: ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಇದಕ್ಕೆ ನಾನೇ ಗ್ಯಾರಂಟಿ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಹಾವೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಆ ಬಳಿಕ ಮತ್ತೆ ಬಿಜೆಪಿ ಸರ್ಕಾರವೇ ಬರಲಿದೆ. ಇದಕ್ಕೆ ನಾನು ಗ್ಯಾರಂಟಿ ಎಂದರು.
ಸಿದ್ಧರಾಮಯ್ಯ ಅವರು ರೈತರನ್ನು ಕಡೆಗಣನೆ ಮಾಡ್ತಿದ್ದಾರೆ. ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತು ಹೋಗಿದೆ. ಗ್ಯಾರಂಟಿ ಯೋಜನೆಯ ಜಾರಿಯ ನಂತ್ರ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತು ಹೋಗಿದ್ದಾರೆ ಎಂದರು.
ಲೋಕಸಭಾ ಚುನಾವಣೆಯ ಬಳಿಕ ಕಾದು ನೋಡಿ ರಾಜ್ಯದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ ಎಂದು ತಿಳಿಸಿದರು.