ಬೆಂಗಳೂರು: ರಾಜ್ಯ ಸರ್ಕಾರ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸುವಂತೆ ಆದೇಶಿಸಿದೆ. ಈ ಮೂಲಕ ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಆಯೋಧ್ಯೆಯ ನವ್ಯ, ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಹೇಳಿದ್ದಾರೆ.
ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ
ಆಯೋಧ್ಯೆಯ ನವ್ಯ, ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ… pic.twitter.com/A5ikzx2ZUl
— R. Ashoka (ಆರ್. ಅಶೋಕ) (@RAshokaBJP) January 7, 2024
ಮತ್ತೊಂದು ಟ್ವಿಟ್ ನಲ್ಲಿ ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.
ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿರುವ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿರುವ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ
ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ.
ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು… pic.twitter.com/V5kn47z3Sy
— R. Ashoka (ಆರ್. ಅಶೋಕ) (@RAshokaBJP) January 7, 2024
ಬೆಂಗಳೂರಲ್ಲಿ ‘ರೇಷ್ಮೆ ಭವನ’ ನಿರ್ಮಾಣಕ್ಕೆ ಹೂಡಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
BREAKING: ‘ಪಶ್ಚಿಮ ಬಂಗಾಳ’ದಲ್ಲಿ ಹಾಡಹಗಲೇ ‘TMC ನಾಯಕ’ನನ್ನು ಗುಂಡಿಕ್ಕಿ ಹತ್ಯೆ