ಬೆಂಗಳೂರು : ಸಿಇಟಿ ಪರೀಕ್ಷೆಯ ವ್ಯವಸ್ಥೆಯನ್ನು ಹಾಳು ಮಾಡಿದ್ದೆ ಕಾಂಗ್ರೆಸ್ ಹಾಗಾಗಿ, ಇದೀಗ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟ ಆಡಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ವಾರ್ಷಿಕೋತ್ಸವ ಮಾಡಲು ಸಾಧ್ಯವಾಗುತ್ತಿಲ್ಲ. ವೈಜ್ಞಾನಿಕವಾಗಿ ರೂಪಗೊಂಡ ಎನ್ ಇ ಪಿಗೆ ಪಿಲಾಂಜಲಿ ಕೊಟ್ಟಿದೆ. ಎಸ್ಇಪಿ ತರುತ್ತೇನೆ ಎಂದು ಹೇಳಿ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಪೂರ್ಣಾವಧಿ ಶಿಕ್ಷಣ ಮಂತ್ರಿ ಇಲ್ಲ ಪಾಪ ತಮ್ಮ ಕುಟುಂಬದ ಯಾರನ್ನು ಗೆಲ್ಲಿಸಲು ಓಡಾಡುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
5 ಮತ್ತು 9ನೇ ತರಗತಿವರೆಗಿನ ಮಕ್ಕಳ ಭವಿಷ್ಯ ಕೋರ್ಟ್ ವರೆಗೆ ಹೋಗಿದೆ.ಮಕ್ಕಳಿಗೆ ಮತದಾನದ ಹಕ್ಕಿಲ್ಲ ಅಂತ ನಿರ್ಲಕ್ಷ ಮಾಡುತ್ತಿದ್ದಾರೆ. ಸಿಇಟಿ ವ್ಯವಸ್ಥೆ ಹಾಳು ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರದ್ದು. ಜಿಲ್ಲೆಯ ಹೊರಗೆ ಹೋಗಿ ವಿದ್ಯಾರ್ಥಿಗಳು ಎಕ್ಸಾಮ್ ಬರೆಯಬೇಕಾಯಿತು. ಆದರೆ ಸಚಿವ ಪ್ರಿಯಾಂಕ ಖರ್ಗೆ ಗಲಾಟೆ ಮಾಡಿದ್ದಕ್ಕೆ ಅವಕಾಶ ಕೊಟ್ಟರು ಅದೇ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟರು ಎಂದರು.
ಪಠ್ಯಕ್ಕೆ ಸಂಬಂಧಿಸದ ವಿಷಯಗಳೇ ಪರೀಕ್ಷೆಯಲ್ಲಿ ಕೇಳಿದ್ರು. ಮಕ್ಕಳ ಕನಸಿಗೆ ಕಲ್ಲು ಹಾಕುವ ಕೆಲಸ ಯಶಸ್ವಿಯಾಗಿ ಮಾಡಿದ್ದಾರೆ. ಕ್ಯಾಮರಾ ಮುಂದೆ ಮಕ್ಕಳು ಪರೀಕ್ಷೆ ಬರೆಯುವ ಹಾಗೆ ಮಾಡಿದರು.ಶಿಕ್ಷಣದ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.