ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡು, ರಾಹುಲ್ ಗಾಂಧಿ ಅವರಿಗೆ ರಾಜ್ಯದ ಹಣವನ್ನು ಕಳುಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡು, ರಾಹುಲ್ ಗಾಂಧಿ ಅವರಿಗೆ ರಾಜ್ಯದ ಹಣವನ್ನು ಕಳುಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ಹಣ ಹಾಗೂ ದಲಿತ ಸಮುದಾಯದ ಹಣವನ್ನು ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಬಳಸಿಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ಕಾಂಗ್ರೆಸ್ ಸರ್ಕಾರ ಬಂಧಿಸಿದೆ ಎಂದು ಬಿಜೆಪಿ ತಿಳಿಸಿದೆ.