ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ಈ ಒಂದು ಹಂತದಲ್ಲಿ ಶೇಕಡ 66 ರಷ್ಟು ಮತದಾನ ನಡೆದಿದೆ. ಈ ಮಧ್ಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ ಈ ಬಾರಿ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಎಂಬಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿ ಮಾಡಿರುವ ಐದು ಗ್ಯಾರಂಟಿಗಳು, ಪ್ರತಿ ಕುಟುಂಬಕ್ಕೂ ತಲುಪಿದೆ. ಮತ್ತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ, ವಿಶ್ವಾಸ ಕ್ಷೇತ್ರದ ಮತದಾರರಲ್ಲಿ ಇರುವುದರಿಂದ ನನಗೆ ಗೆಲುವು ಸಿಗುತ್ತದೆ ಎಂದು ತಿಳಿಸಿದರು.
ನಮ್ಮ ತಂದೆ ಬಂಗಾರಪ್ಪನವರು ಬಡವರಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಭಾವನಾತ್ಮಕ ಹೇಳಿಕೆಗಳಿಂದ ಗೆದ್ದಿರಬಹುದು.ಆದರೆ ಈಗ ಜನರಿಗೆ ಅರ್ಥವಾಗಿದೆ. ಕಾಂಗ್ರೆಸ್ ಎಲ್ಲಾ ಧರ್ಮ ಹಾಗೂ ಜಾತಿಗಳನ್ನು ಸಮಾನವಾಗಿ ಕಾಣುತ್ತಾ ಸರ್ವಧರ್ಮಗಳ ಪರವಾಗಿದೆ.ಹಾಗಾಗಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.