ಬೆಂಗಳೂರು : ಬೆಂಗಳೂರಿನಲ್ಲಿ ತಲೆ ದೂರಿರುವ ನೀರಿನ ಸಮಸ್ಯೆ ಕುರಿತಂತೆ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್ಸಿನ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಿದ್ದಂತೆ ಎಂದು ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ಸರ್ಕಾರದ ಬಳಿ ಬೋರ್ವೆಲ್ ಕೊರಿಸುವುದಕ್ಕೂ ಹಣವಿಲ್ಲ ಎಂದು ತಿಳಿಸಿದರು.
ನಿಮ್ಮ 2000 ಯಿಂದ ಏನು ಆಗುತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ವಿದೇಶ ಚಾನೆಲಿನಲ್ಲಿ ಬೆಂಗಳೂರಿನ ಮರ್ಯಾದೆ ಹೋಗುತ್ತಿದೆ.ನೀರಿನ ಸಮಸ್ಯೆ ಇದೆ, ಅಲ್ಲಿ ಯಾರು ಹೋಗಬೇಡಿ ಅಂತಿದ್ದಾರೆ ಎಂದು ಅವರು ತಿಳಿಸಿದರು.
ಡಿ ಕೆ ಶಿವಕುಮಾರ್ ಸಿದ್ದರಾಮಯ್ಯ ಜೋಡಿಯಿಂದ ನೀರಿನ ಸಮಸ್ಯೆ ಉಂಟಾಗಿದೆ.ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕಿದೆ.ಕಾಂಗ್ರೆಸ್ ನ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಿದ್ದಂತೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.