ಕಲಬುರಗಿ : ಕಲ್ಯಾಣ ಕರ್ನಾಟಕದಿಂದ ಎಲ್ಲ ಸ್ಥಾನಮಾನವನ್ನು ಪಡೆದುಕೊಂಡರು ಕೂಡ ಕಾಂಗ್ರೆಸ್ ಈ ಭಾಗಕ್ಕೆ ದ್ರೋಹ ಬಗೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಅವರು ಕಲಬುರಗಿಯ ಕಮಲಾಪುರದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಗಾಳಿ ಸುನಾಮಿಯಂತೆ ಬೀಸುತ್ತಿದೆ. ಕಾಂಗ್ರೆಸ್ ಮುಂಬರುವ 2023ರ ಚುನಾವಣೆಯಲ್ಲಿ ಧೂಳಿಪಟವಾಗಲಿದೆ. ಕಲ್ಯಾಣ ಕರ್ನಾಟಕದ ಜನರು ಜಾಗೃತರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಆಟ ನಡೆಯುವುದಿಲ್ಲ ಎಂದರು.
PSI ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು – ಸಿಎಂ ಬಸವರಾಜ ಬೊಮ್ಮಾಯಿ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ನೀಡಿದ್ದು,ಮುಂದಿನ ಬಜೆಟ್ ನಲ್ಲಿ ಅದನ್ನು 5 ಸಾವಿರ ಕೋಟಿಗೆ ಹೆಚ್ಚಿಸಲಾಗುವುದು ಈ ಭಾಗದ ಅಭಿವೃದ್ಧಿಗೆ ಹಣ ನೀಡಿದರೆ, ಕಾಂಗ್ರೆಸ್ ನವರು ಅದನ್ನು ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗುವುದು ಇಷ್ಟವಿಲ್ಲ. ಕೇವಲ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರು ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿಲ್ಲ. ಎಸ್.ಸಿ, ಎಸ್.ಟಿಯವರಿಗೆ, ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ ಎಂದರು.
ಫಲಾಯನವಾದದ ನಾಯಕತ್ವ
ಕಾಂಗ್ರೆಸ್ ದೇಶದೆಲ್ಲೆಡೆ ಮುಳುಗಿದೆ. ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆ ನಡೆಯುತ್ತಿದ್ದರೆ, ರಾಹುಲ್ ಗಾಂಧಿ ಆಂಧ್ರಪ್ರದೇಶದಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಎಲ್ಲಿ ಯುದ್ಧವಿದೆ, ಅಲ್ಲಿ ಹೋರಾಟ ಮಾಡುವವನು ನಿಜವಾದ ನಾಯಕ. ಫಲಾಯನವಾದದ ನಾಯಕತ್ವ ಕಾಂಗ್ರೆಸ್ ಗೆ ಇದೆ. ಮುಳುಗುತ್ತಿರುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಧ್ಯಕ್ಷರಾಗುತ್ತಿದ್ದಾರೆ. ಅಧಿಕಾರ ಇದ್ದಾಗ ಕಾಂಗ್ರೆಸ್ ನಾಯಕತ್ವ ನೀಡಿದ್ದರೆ ನಾವೆಲ್ಲ ಸ್ವಾಗತ ಮಾಡುತ್ತಿದ್ದೆವು. ಕಾಂಗ್ರೆಸ್ ಮುಳುಗಿದರೆ ಖರ್ಗೆಯವರ ಹೆಸರಾಗಬೇಕು ಅಂತ ಮಾಡಿದ್ದಾರೆ ಎಂದು ಸಿಎಂ ಹೇಳಿದರು.
BIGG NEWS ; ‘NEP’ ಇಂಗ್ಲಿಷ್ ‘ಗುಲಾಮ ಮನಸ್ಥಿತಿ’ಯಿಂದ ಭಾರತವನ್ನ ಹೊರ ತರುತ್ತದೆ ; ಪ್ರಧಾನಿ ಮೋದಿ
ವಿಶೇಷವಾದ ಪ್ರಾಶ್ಯಸ್ತ
ಕರ್ನಾಟಕದ ಅಭಿವೃದ್ಧಿಗೆ ಶಾಲಾ ಕೊಠಡಿ, ವಸತಿ ನಿಲಯ, ಆಸ್ಪತ್ರೆ, ರಸ್ತೆ ಹಾಗೂ ನೀರಾವರಿಗೆ ವಿಶೇಷವಾದ ಪ್ರಾಶ್ಯಸ್ತವನ್ನು ಕೊಟ್ಟಿದ್ದೇವೆ. ಕಲಬುರಗಿ, ಯಾದಗಿರಿಯಲ್ಲಿ ಟೆಕ್ಸಟೈಲ್ ಪಾರ್ಕ್ ರಾಜ್ಯ ಸರ್ಕಾರದಿಂದ ಮಾಡಿದ್ದೇವೆ. ಕಲಬುರಗಿ ವಿಮಾನ ನಿಲ್ಧಾಣ ನಿರ್ಮಾಣದ ಅಭಿವೃದ್ಧಿ ಕೆಲಸ ಆಗುತ್ತಿದೆ. 50 ವರ್ಷಗಳ ಬೇಡಿಕೆ ಎಸ್.ಸಿ, ಎಸ್.ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇವೆ. ಕಾಂಗ್ರೆಸ್ ನಿಂದ ಮಾಡಲು ಆಗಿರಲಿಲ್ಲ. ಅಂತಹ ಐತಿಹಾಸಿಕ ನಿರ್ಣಯವನ್ನು ನಮ್ಮ ಸಚಿವ ಸಂಪುಟದಲ್ಲಿ ತೆಗೆದುಕೊಂಡು ಸ್ವಾಭಿಮಾನದಿಂದ ಬದುಕುವ ರೀತಿಯಲ್ಲಿ ನಾವು ಮಾಡಿದ್ದೇವೆ ಎಂದರು. .
ಜನರ ಸಂಕಲ್ಪವೇ ನಮ್ಮ ಸಂಕಲ್ಪ
ಜನರ ಸಂಕಲ್ಪವೇ ನಮ್ಮ ಬಿಜೆಪಿಯ ಸಂಕಲ್ಪ. 2023 ರಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿಕೊಡಿ. ಕಲ್ಯಾಣ ಕರ್ನಾಟಕದಲ್ಲಿ ಕಡೆ ಬಿಜೆಪಿ ಗಾಳಿ ಸುನಾಮಿಯಂತೆ ಬೀಸುತ್ತಿದೆ. ನವ ಕರ್ನಾಟಕದಿಂದ ನವ ಭಾರತವನ್ನು ಕಟ್ಟುವ ಸಂಕಲ್ಪವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದರು.
ಬಸವರಾಜ ಮತ್ತಿಮೂಡ ಈ ಕ್ಷೇತ್ರದ ಸಮಸ್ತ ಅಭಿವೃದ್ಧಿಗೆ ಕೆಲಸವನ್ನು ಮಾಡುತ್ತಿದ್ದಾರೆ. ಕ್ಷೇತ್ರದ ಶಾಸಕರಾದ ಮೇಲೆ 1,500 ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. ಅವರನ್ನು 25 ಸಾವಿರ ಮತಗಳ ಅಂತರದಿಂದ ಮತ್ತೊಮ್ಮೆ ಗೆಲ್ಲಿಸಿಕೊಡಬೇಕೆಂದು ಸಿಎಂ ಬೊಮ್ಮಾಯಿ ನುಡಿದರು.
ಅಲ್ಪ ಸಂಖ್ಯಾತರ ಸಾವಿರಾರು ಕೋಟಿ ವಕ್ಫ ಆಸ್ತಿಯನ್ನು ಕಾಂಗ್ರೆಸ್ ನಾಯಕರು ನುಂಗಿ ನೀರು ಕುಡಿದಿದ್ದಾರೆ
ಕಾಂಗ್ರೆಸ್ ನವರು ಅಲ್ಪ ಸಂಖ್ಯಾತರಿಗೆ ದ್ರೋಹ ಮಾಡಿದ್ದಾರೆ. ಸಮುದಾಯದ ಸಾವಿರಾರು ಕೋಟಿ ಮೌಲ್ಯದ ವಕ್ಫ ಆಸ್ತಿಯನ್ನು ಕಾಂಗ್ರೆಸ್ ನಾಯಕರು ನುಂಗಿ ನೀರು ಕುಡಿದಿದ್ದಾರೆ. ಕಲಬುರಗಿ, ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿರುವ ವಕ್ಫ ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈಗಾಗಲೇ ಅದರ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಇನ್ನಷ್ಟು ಹೆಚ್ಚಿನ ತನಿಖೆಗೆ ನಾವು ಆದೇಶಿಸಿಸುತ್ತೇವೆ. ಅಲ್ಪಸಂಖ್ಯಾತರ ಮತ ಪಡೆದು ಅವರಿಗೆ ದ್ರೋಹ ಮಾಡಿದ್ದಾರೆ. ಅದೆಲ್ಲವನ್ನು ಬಯಲಿಗೆ ತರುತ್ತೇವೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಗೆ ಅಲ್ಪಸಂಖ್ಯಾತರು ಕೂಡ ಬೆಂಬಲ ನೀಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.