ಶೀವಮೊಗ್ಗ : ನಗರ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ರಾಜ್ ಚುನಾವಣೆ ನಡೆಸದೆ ಕಾಂಗ್ರೇಸ್ ಪಕ್ಷ ರಾಜೀವ್ ಗಾಂಧಿ ಅವರ ಆಶಯಕ್ಕೆ ದ್ರೋಹ ಬಗೆದಿದೆ. ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಕಲ್ಪನೆಯನ್ನು ಕಾಂಗ್ರೇಸ್ ಪಕ್ಷ ಮೂಲೆಗುಂಪು ಮಾಡಿದೆ ಎಂದು ಕಾಂಗ್ರೇಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪ, ಯುದ್ದ ಇನ್ನಿತರೆ ತುರ್ತು ಸಂದರ್ಭದಲ್ಲಿ ಮಾತ್ರ ಚುನಾವಣೆ ನಡೆಸಬಾರದು ಎನ್ನುವ ನಿಯಮವಿದೆ. ಆದರೆ ಕಳೆದ ಐದು ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸದೆ ಸ್ಥಳೀಯ ಸಂಸ್ಥೆಗೆ ಆಯ್ಕೆಯಾಗಬೇಕಾಗಿದ್ದ ಚುನಾಯಿತ ಪ್ರತಿನಿಧಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದರು.
ಲೋಕಸಭೆ, ವಿಧಾನಸಭೆ ಚುನಾವಣೆ ಕಾಲಕಾಲಕ್ಕೆ ನಡೆಯುತ್ತದೆ. ಆದರೆ ನಗರ ಸ್ಥಳೀಯ ಸಂಸ್ಥೆ, ಪಂಚಾಯತ್ ರಾಜ್ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುತ್ತಿಲ್ಲ. ಸಂವಿಧಾನದ ಕಲಂ 73 ಮತ್ತು 74ರ ತಿದ್ದುಪಡಿಯ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಆಡಳಿತಾಧಿಕಾರಿ ಹಾಕಬಾರದು ಎನ್ನುವ ನಿಯಮ ಇದ್ದರೂ ಕಳೆದ ಐದು ವರ್ಷಗಳಿಂದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದೆ ಆಡಳಿತಾಧಿಕಾರಿ ಹಾಕಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳು ಬಂದರೆ ತಮ್ಮ ಅಧಿಕಾರ ಮೊಟಕು ಆಗುತ್ತದೆ ಎಂದು ರಾಜ್ಯದ 224 ಶಾಸಕರು ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಹೇಳಿದರು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗೆ ಪ್ರತಿವರ್ಷ ಕೇಂದ್ರ ಸರ್ಕಾರ 16ನೇ ಹಣಕಾಸು ಯೋಜನೆಯಡಿ ಒಂದೊಂದು ಕ್ಷೇತ್ರಕ್ಕೆ 25 ರಿಂದ 30 ಕೋಟಿ ರೂ. ಪ್ರತಿವರ್ಷ ನೀಡುತಿತ್ತು. ಇದು ಐದು ವರ್ಷದಿಂದ ನಿಂತು ಹೋಗಿದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಹಣ ಕೊಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಗ್ರಾಮೀಣ ಅಭಿವೃದ್ದಿ ನಿಂತ ನೀರಾಗಿದೆ. ಸ್ಥಳೀಯ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಚುನಾವಣೆ ನಡೆಸದೆ ಇರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಬೇಕು. ಸರ್ಕಾರ ತಕ್ಷಣ ಚುನಾವಣೆಗೆ ದಿನಾಂಕ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಾಮಾಜಿಕ ಕಾರ್ಯಕರ್ತ ಕುಂಟಗೋಡು ಸೀತಾರಾಮ್ ಮಾತನಾಡಿದರು. ಗೋಷ್ಟಿಯಲ್ಲಿ ಕೃಷ್ಣಮೂರ್ತಿ, ಬಸವರಾಜ್ ಹಾಜರಿದ್ದರು.
ಅಭಿವೃದ್ಧಿಗಾಗಿ ಸಿದ್ಧರಾಮಯ್ಯ ಮಾತ್ರವಲ್ಲ, ಪ್ರಧಾನಿ ಮೋದಿ ಸಹ ಸಾಲ ಮಾಡಿದ್ದಾರೆ: ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: 11 ಕೋಟಿ ವೆಚ್ಚದಲ್ಲಿ ಸಾಗರದ ಹಾನಂಬಿ ಹೊಳೆಗೆ ಚಾನಲ್ ನಿರ್ಮಾಣ- ಶಾಸಕ ಗೋಪಾಲಕೃಷ್ಣ ಬೇಳೂರು








