ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಆರ್.ಅಶೋಕ

ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ … Continue reading ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಆರ್.ಅಶೋಕ