ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav), ಬಿಎಸ್ಪಿ ವರಿಷ್ಠೆ ಮಾಯಾವತಿ (Mayawati ) ಮತ್ತು ಆರ್ಎಲ್ಡಿಯ ಜಯಂತ್ ಚೌಧರಿ (Jayant Chaudhary) ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವು ನಾಯಕರನ್ನು ಉತ್ತರ ಪ್ರದೇಶದ ಭಾರತ್ ಜೋಡೊ (Bharat Jodo Yatra) ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಆಹ್ವಾನಿಸಿದೆ.
ಲಕ್ನೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಗೂ ವಿವಿಯ ಮತ್ತೊಬ್ಬ ಪ್ರಾಧ್ಯಾಪಕ ರವಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ (Bharat Jodo Yatra) ಜನವರಿ 3 ರಂದು ಗಾಜಿಯಾಬಾದ್ನ ಲೋನಿ ಮೂಲಕ ಉತ್ತರ ಪ್ರದೇಶವನ್ನು ಪ್ರವೇಶಿಸಲಿದೆ. ನಂತರ ಬಾಗ್ಪತ್ ಮತ್ತು ಶಾಮ್ಲಿ ಮೂಲಕ ಹರಿಯಾಣವನ್ನು ಪ್ರವೇಶಿಸುತ್ತದೆ.
ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಪಕ್ಷ ಆಹ್ವಾನ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶವಿಲ್ಲದ ಪ್ರಸ್ತುತ ದಿನಗಳಲ್ಲಿ, ಜನರ ಮನಸ್ಸನ್ನು ತಿಳಿದುಕೊಳ್ಳಲು ಈ ಯಾತ್ರೆ ಏಕೈಕ ಆಯ್ಕೆಯಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಇಡೀ ವಿಪಕ್ಷಗಳು ಈ ಸರ್ಕಾರದ ಬಗ್ಗೆ ಬಹುತೇಕ ಒಂದೇ ಅಭಿಪ್ರಾಯವನ್ನು ಹೊಂದಿರುವುದರಿಂದ ಯಾತ್ರೆಯಲ್ಲಿ ಭಾಗವಹಿಸಲು ಅವರನ್ನು ಆಹ್ವಾನಿಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಯಾದವ್, ಮಾಯಾವತಿ ಮತ್ತು ಚೌಧರಿ ಅವರಲ್ಲದೆ, ಎಸ್ಪಿ ಶಾಸಕ ಶಿವಪಾಲ್ ಸಿಂಗ್ ಯಾದವ್, ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂಪ್ರಕಾಶ್ ರಾಜ್ಭರ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಕಾರ್ಯದರ್ಶಿ ಅತುಲ್ ಅಂಜನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪ್ರಚಾರದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೂರು ದಿನಗಳಲ್ಲಿ ರಾಜ್ಯದಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
BREAKING NEWS : ವಿಶ್ವಸಂಸ್ಥೆ ಸದಸ್ಯ ರಾಷ್ಟ್ರಗಳಿಂದ ‘ರಷ್ಯಾ’ ತೆಗೆದುಹಾಕಿ ; ಉಕ್ರೇನ್ ಕರೆ
ಕಂಗನಾ ರನೌತ್ಗೆ ಪದ್ಮಶ್ರೀ ಪ್ರಶಸ್ತಿ: ದಕ್ಷಿಣ ಭಾರತದ ನಟಿ ಜಯಸುಧಾ ಪ್ರಶ್ನೆ
ಸರ್ಕಾರ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಶೇ.5ರಷ್ಟು ಡಿಎ, ಫಿಟ್ಮೆಂಟ್ ಅಂಶ ಹೆಚ್ಚಳ, ಸ್ಯಾಲರಿ ಹೈಕ್