ಕಾಂಗ್ರೆಸ್‌ನದ್ದು ಗೂಂಡಾ ರಾಜ್ಯ, ಪೊಲೀಸ್‌ ಇಲಾಖೆ ಸತ್ತಿದೆ- ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರು ಗನ್‌ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್‌ ವಾಪಸ್‌ ಕೊಡಬೇಕಾಗಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್‌ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. … Continue reading ಕಾಂಗ್ರೆಸ್‌ನದ್ದು ಗೂಂಡಾ ರಾಜ್ಯ, ಪೊಲೀಸ್‌ ಇಲಾಖೆ ಸತ್ತಿದೆ- ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಕಿಡಿ