ಬೆಂಗಳೂರು: ನಾಳೆ, ನಾಡಿದ್ದು ವಿಧಾನ ಪರಿಷತ್ತಿನಲ್ಲಿ ಕೆಲ ಮಹತ್ವದ ವಿಧೇಯಕಗಳನ್ನು ಕಾಂಗ್ರೆಸ್ ಸರ್ಕಾರ ಮಂಡನೆ ಮಾಡಲಾಗುತ್ತಿದೆ. ಈ ಬಗ್ಗೆ ಮಹತ್ವದ ಚರ್ಚೆ ಕೂಡ ನಡೆಯಲಿದೆ. ಈ ಹಿನ್ನಲೆಯಲ್ಲಿ ಸದನದ ಸದಸ್ಯರಿಗೆ ಕಡ್ಡಾಯವಾಗಿ ಹಾಜರಿರುವಂತೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ವಿಧಾನಪರಿಷತ್ ಸದಸ್ಯರಿಗೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಚರ್ಚೆಗೆ ಬರಲಿದ್ದಾವೆ ಅಂತ ಹೇಳಿದ್ದಾರೆ.
ದಿನಾಂಕ 25-07-2024 ಹಾಗೂ 26-07-2024ರಂದು ಅಧಿವೇಶನದ ಪ್ರಾರಂಭದಿಂದ ಮುಗಿಯುವವರೆಗೂ ತಾವುಗಳು ವಿಧಾನ ಪರಿಷತ್ ಕಲಾಪಗಳ ಸಂದರ್ಭದಲ್ಲಿ ಕಡ್ಡಾಯವಾಗಿ ಸನದಲ್ಲಿ ಹಾಜರಿರಲು ವಿಪ್ ನೀಡಲಾಗಿದೆ ಅಂತ ತಿಳಿಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ: ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ, ವರದಿ ಸಾಧ್ಯತೆ