ವಿಜಯಪುರ: ಇಂದು ವಿಜಯಪುರದಲ್ಲಿ ಕಾಂಗ್ರೆಸ್ ಕೃಷ್ಣ ಜನಾಂದೋಲನ ಸಮಾವೇಶವನ್ನು ಆಯೋಜಿಸಿದೆ. ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ.
BIGG NEWS: ಹೊಸ ವರ್ಷದಿಂದ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್; ಮಾಸಿಕ ಪಾಸ್, ದಿನದ ಪಾಸ್, ಟಿಕೆಟ್ ದರ ಹೆಚ್ಚಳ
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸರ್ಕಾರದ ವಿಳಂಬವನ್ನು ಪ್ರಶ್ನಿಸಲಾಗುತ್ತದೆ.ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವೈಫಲ್ಯದ ಕುರಿತು ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್, ಡಾ. ಜಿ ಪರಮೇಶ್ವರ, ಕೆಪಿಸಿಸಿ ಪ್ರಚಾರ ಸಮೀತಿ ಆಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್ ಕೆ ಪಾಟೀಲ ಹಾಗೂ ಹಾಲಿ ಮಾಜಿ ಶಾಸಕರು ಸೇರಿದಂತೆ ಅನೇಕರು ಭಾಗಿಯಾಲಿದ್ದಾರೆ.