Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹಣ ಬಿಡುಗಡೆ ಮಾಡಿದ ಪಾಕಿಸ್ತಾನ

16/05/2025 5:54 PM

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

16/05/2025 5:52 PM

BREAKING: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾಕರ ಮೂವರು ಸಹಚರರ ಬಂಧನ

16/05/2025 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಇದು ಸಿಎಂ ಸಿದ್ಧರಾಮಯ್ಯ ಫಸ್ಟ್ ರಿಯಾಕ್ಷನ್ | CM Siddaramaiah
KARNATAKA

ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಇದು ಸಿಎಂ ಸಿದ್ಧರಾಮಯ್ಯ ಫಸ್ಟ್ ರಿಯಾಕ್ಷನ್ | CM Siddaramaiah

By kannadanewsnow0923/11/2024 4:37 PM

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಂತ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏನು ಹೇಳಿದ್ರು ಅಂತ ಅವರ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.

        ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ,  ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು

        ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

        ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ.

        ಇದು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-;ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ.

        ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಬಗ್ಗೆ ಜನರ  ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಝನೆಗಳ ಬಗ್ಗೆ ಅಪಪ್ರಚಾರ ಮಾಡುತ್ಗಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಲ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ.

        ಇವೆಲ್ಲಕ್ಕಿಂತಲೂ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿ್ದಾರೆ.

        ಈ ಎರಡೂ ಪಕ್ಷಗಳು ಕೂಡಿ ಕೊಂಡುರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು.  ರಾಜಕೀಯ ದ್ವೇಷಸಾಧನೆಗಾಗಿ ನನ್ನ ಕುಟುಂಬದ ವಿರುದ್ದವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಢಿದ್ದಾರೆ.

        ಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ  ನನ್ನ ರಾಜಕಾರಣವನ್ನು  ಕಂಡಿದ್ದಾರೆ. ಬಿಜಪೆ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ.

        ಎರಡನೆಯದಾಗಿ ಬಿಜೆಪಿ ಮತ್ತು ಜೆಡಿಎಸ್  ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ ಜಾತಿ-ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದೆ. ಕರ್ನಾಟಕದ ಜಾತ್ಯತೀತ ಮತ್ತು ಶಾಂತಿಪ್ರಿಯ ಇದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ.

        ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ದದ ಮತದಾರರ 136 ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. – ಆದರೆ ಚುನಾವಣಾ ಫಲಿತಾಂಶದ ಮರುದಿನದಿಂದಲೇ  ಬಿಜೆಪಿ ಮತ್ತು ಜೆಡಿಎಸ್ ಕೂಡಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನ ಶುರು‌ಮಾಡಿದ್ದರು.  ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನ‌ ಮಾಡಿದ್ದರು. – ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ರಾಜ್ಯದ ಜನತೆ ಸಹಿಸಿಲ್ಲ ಎನ್ನುವುದನ್ನು ಕೂಡಾ ಈ ಫಲಿತಾಂಶ ಹೇಳಿದೆ..

        ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿರುವುದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಮ್ ವ್ಯಕ್ತಿಗೆ ನಾವು ಟಿಕೆಟ್ ಕೊಟ್ಟೆವು. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ‍್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ‍್ಥಿಯನ್ನು ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವಾಗಿದೆ ಎಂಧು ನಾನು ಭಾವಿಸಿದ್ದೇನೆ

        ಕೊನೆಯದಾಗಿ ಉಪಚುನಾವಣೆಗಳಲ್ಲಿ ಸೋಲು ಬಿಜೆಪಿ ನಾಯಕರ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ. ಇನ್ನಾದರೂ ಅವರು ರಾಜಕೀಯ ದ್ವೇಷದ ರಾಜಕಾರಣವನ್ನು ಕೈಬಿಟ್ಟು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡಲಿ.

ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು. ಇಬ್ಬರೂ ಒಟ್ಟಾಗಿ ಚುನಾವಣೆ ಮಾಡಿದ್ರು. ಪಾದಯಾತ್ರೆ ಮಾಡಿದ್ದೇನು ? ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು ಅವಮಾನಿಸಿದರು. ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು.

ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಗ್ಯಾರಂಟಿಗಳೇ ಜಾರಿ ಆಗಿಲ್ಲ ಎಂದು ಸುಳ್ಳು ಜಾಹಿರಾತನ್ನೇ ನೀಡಿತು. ನಿರಂತರ ಸುಳ್ಳು, ಅಪಪ್ರಚಾರದಲ್ಲೇ ಈ ಉಪಚುನಾವಣೆ ನಡೆಸಿದ್ದರು. ಎಲ್ಲಾ ಸುಳ್ಳು, ಅಪಪ್ರಚಾರಗಳಿಗೂ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಆರೋಪ ನನಗೆ ಬಹಳ ಬೇಸರ ಆಗಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಆದ್ರೂ  ಕೂಡ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತೆಲ್ಲಾ ಮಾತಾಡಿದರು.

ಪಕ್ಷದ ಅಧ್ಯಕ್ಷರು, ಮಂತ್ರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಎಲ್ಲರ ಶ್ರಮಕ್ಕೆ ಸಾರ್ಥಕತೆ ಸಿಕ್ಕಿದೆ. ವಯನಾಡ್ ನಲ್ಲಿ 4 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಪ್ರಿಯಾಂಕ ಗಾಂಧಿಯವರಿಗೆ ಮತ್ತು ಕೇರಳ ಜನತೆಗೆ ಅಭಿನಂದನೆಗಳು. ಜಾರ್ಖಂಡ್ ನಲ್ಲಿ ಮುಖ್ಯಮಂತ್ರಿ ಸುರೇನ್ ಅವರನ್ನು ED ಯವರು ಜೈಲಿಗೆ ಕಳುಹಿಸಿದ್ದರು. ಬಿಜೆಪಿಯವರು ಸುಳ್ಳು ಕೇಸಲ್ಲಿ ಮುಖ್ಯಮಂತ್ರಿಯವರನ್ನು ಜೈಲಿಗೆ ಕಳುಹಿಸಿದರೂ ಜನತಾ ನ್ಯಾಯಾಲಯದಲ್ಲಿ ಜನ ಅವರ ಪರವಾಗಿ ಜನಾದೇಶ ಕೊಟ್ಟಿದ್ದಾರೆ. ಜಾರ್ಖಂಡ್ ಜನರನ್ನು ಅಭಿನಂಧಿಸುತ್ತೇನೆ ಎಂದರು.

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

BREAKING: ಮತದಾರರ ತೀರ್ಪಿಗೆ ನಾನು ತಲೆಬಾಗಿದ್ದೇನೆ: ಚನ್ನಪಟ್ಟಣದಲ್ಲಿ ಸೋಲಿನ ಬಳಿಕ ನಿಖಿಲ್ ಫಸ್ಟ್ ರಿಯಾಕ್ಷನ್

Share. Facebook Twitter LinkedIn WhatsApp Email

Related Posts

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

16/05/2025 5:52 PM1 Min Read

BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್

16/05/2025 5:40 PM2 Mins Read

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM1 Min Read
Recent News

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹಣ ಬಿಡುಗಡೆ ಮಾಡಿದ ಪಾಕಿಸ್ತಾನ

16/05/2025 5:54 PM

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

16/05/2025 5:52 PM

BREAKING: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾಕರ ಮೂವರು ಸಹಚರರ ಬಂಧನ

16/05/2025 5:47 PM

BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್

16/05/2025 5:40 PM
State News
KARNATAKA

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

By kannadanewsnow0516/05/2025 5:52 PM KARNATAKA 1 Min Read

ಚಿಕ್ಕಬಳ್ಳಾಪುರ : ಜಮೀನಿಗೆ ನೀರು ಬಿಡುವ ವಿಚಾರವಾಗಿ ಗಲಾಟೆ ನಡೆದಿದೆ ಈ ವೇಳೆ ಗಲಾಟೆಯಲ್ಲಿ ಅಪ್ಪ-ಮಗ ಸೇರಿ ವ್ಯಕ್ತಿಯನ್ನು ಮಚ್ಚಿನಿಂದ…

BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್

16/05/2025 5:40 PM

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.