ತುಮಕೂರು: ಕಾಂಗ್ರೆಸ್ ನಾಯಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ ದೂರದಾರ ರವಿಕುಮಾರ್ ನೀಡಿದ ದೂರಿನಡಿ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ ಅಂತ ತಿಳಿದು ಬಂದಿದೆ.
ದೂರದಾರ ರವಿಕುಮಾರ್ ತಮಗೆ ಆಗಿದ್ದ ಟೆಂಡರ್ ಅನ್ನು ರದ್ದು ಮಾಡಿರುವ ಬಗ್ಗೆ ಪ್ರತಿಭಟನೆಯನ್ನು ಪಿಡಬ್ಲ್ಯುಡಿ ಕಚೇರಿ ಆವರಣದಲ್ಲಿ ನಡೆಸುತ್ತಿದ್ದರು, ಈ ವೇಳೆ ತಡರಾತ್ರಿ ಸುಮಾರು 11.30 ಗಂಟೆಗೆ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಮತ್ತು ಸಹಚರರು ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.