ಬೆಂಗಳೂರು: ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ಕಾಂಗ್ರೆಸ್ ಮುಖಂಡನೊಬ್ಬ ನಿಂದಿಸಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದು, ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಆಡಿಯೋವನ್ನು ಶೇರ್ ಮಾಡಿರುವಂತ ಜೆಡಿಎಸ್ ಪಕ್ಷವು, ಕರ್ನಾಟಕ ಕಾಂಗ್ರೆಸ್ ಪಕ್ಷದ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಕಿಡಿಕಿಡಿಯಾಗಿದೆ.
ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ ಎಂದಿದೆ.
ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ ಎಂದು ಹೇಳಿದೆ.
ಸಿಎಂ ಸಿದ್ಧರಾಮಯ್ಯ, ಗೃಹ ಸಚಿವರ ಡಾ.ಜಿ ಪರಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಗೂಂಡಾ ರಾಜೀವ್ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ ಎಂದು ಆಗ್ರಹಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ, KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಅಂತ ಒತ್ತಾಯಿಸಿದೆ.
" @INCKarnataka ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ.
ಸಚಿವ @BZZameerAhmedK ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ… pic.twitter.com/c65czp6k9j
— Janata Dal Secular (@JanataDal_S) January 14, 2026








