ದಾವಣಗೆರೆ: ಮಾಜಿ ಸಿಎಂ ಸಿದ್ಧರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳೋದಕ್ಕೆ ಆಗಮಿಸಿರುವಂತ ಎಐಸಿಸಿ ನಾಯಕ ರಾಹುಲ್ ಗಾಂಧಿ ( AICC Leader Rahul Gandhi ) ಅವರಿಗೂ ಟ್ರಾಫಿಕ್ ಬಿಸಿ ಮುಟ್ಟಿದೆ.
ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ
ಇಂದು ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಜನ್ಮ ದಿನಾಚರಣೆ ನಿಮಿತ್ತ, 75ನೇ ಅಮೃತ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದಿಂದ ಆಚರಿಸಲಾಗುತ್ತಿದೆ.
ಇಂದಿನ 75ನೇ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳೋದಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ನಂತ್ರ, ರಸ್ತೆ ಮಾರ್ಗವಾಗಿ ದಾವಣಗೆರೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಕೆಲ ಕಾಲ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಅನುಭವಿಸಬೇಕಾಯಿತು.
ಈ ಹಿನ್ನಲೆಯಲ್ಲಿ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ತಡವಾಗಿ ಆಗಮಿಸೋ ಸಾಧ್ಯತೆ ಇದೆ.